ಬೆಂಗಳೂರು: ಐದನೇ ಮಹಡಿಯಿಂದ ಜಿಗಿದು ಕಲಬುರಗಿ ಮೂಲದ ಬಿಟೆಕ್ ಪದವೀಧರ ಸಾವು
ಪೂರ್ವ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ 23 ವರ್ಷದ ಉದ್ಯೋಗ ಆಕಾಂಕ್ಷಿಯೊಬ್ಬ ಪೇಯಿಂಗ್ ಗೆಸ್ಟ್ ವಸತಿಗೃಹದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.

ಬೆಂಗಳೂರು: ಪೂರ್ವ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ 23 ವರ್ಷದ ಉದ್ಯೋಗ ಆಕಾಂಕ್ಷಿಯೊಬ್ಬ ಪೇಯಿಂಗ್ ಗೆಸ್ಟ್ ವಸತಿಗೃಹದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.
ಮೃತರನ್ನು ಕಲಬುರಗಿ ಮೂಲದ ಬಿಟೆಕ್ ಪದವೀಧರ ಅರುಣ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ವೈಟ್ ಫೀಲ್ಡ್‌ನ ಗಾಂಧಿಪುರದಲ್ಲಿ ಪೇಯಿಂಗ್ ಗೆಸ್ಟ್ ಆಗಿ ಉಳಿದುಕೊಂಡು ಕೆಲಸ ಹುಡುಕುತ್ತಿದ್ದರು.
ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಯಾರೂ ಇಲ್ಲದ ವೇಳೆ ಕುಮಾರ್ ಕಟ್ಟಡದಿಂದ ಜಿಗಿದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಮತ್ತು ಘಟನೆಯನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


