ರಾಜ್ಯ

ಶಾಸಕ ಪ್ರದೀಪ್ ಈಶ್ವರ್ 'ಸೂಪರ್ 60' ಯೋಜನೆ: SSLC ವಿದ್ಯಾರ್ಥಿಗಳ ಸಾಧನೆ

ಚಿಕ್ಕಬಳ್ಳಾಪುರ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಾಸಕ ಪ್ರದೀಪ್ ಈಶ್ವರ್ ಅವರು ಜಿಲ್ಲೆಯಲ್ಲಿ ‘ಸೂಪರ್ 60’ ಎಂಬ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್ 'ಸೂಪರ್ 60' ಯೋಜನೆ: SSLC ವಿದ್ಯಾರ್ಥಿಗಳ ಸಾಧನೆ
ಪರಿಶ್ರಮ ನೀಟ್ ಅಕಾಡೆಮಿ ಮಕ್ಕಳೊಂದಿಗೆ ಶಾಸಕ ಪ್ರದೀಪ್ ಈಶ್ವರ್
Published On :

ಬೆಂಗಳೂರು: ‘ಸೂಪರ್ 60’ ಯೋಜನೆಯಡಿ ಎಸ್ ಎಸ್ ಎಲ್ ಸಿ ಓದುತ್ತಿರುವ 60 ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಯಿತು. ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಮತ್ತು ತಮ್ಮ ಸಂಸ್ಥೆಗಳಿಗೆ ಹೆಮ್ಮೆ ತಂದಿದ್ದಾರೆ ಎಂದು ಪರಿಶ್ರಮ ನೀಟ್ ಅಕಾಡೆಮಿ ತಿಳಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಾಸಕ ಪ್ರದೀಪ್ ಈಶ್ವರ್ ಅವರು ಜಿಲ್ಲೆಯಲ್ಲಿ ‘ಸೂಪರ್ 60’ ಎಂಬ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ ಎಂದು ಅಕಾಡೆಮಿ ತಿಳಿಸಿದೆ. ಇದರಡಿ ಚಿಕ್ಕಬಳ್ಳಾಪುರ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಬಡ ಕುಟುಂಬದ 60 ಮಕ್ಕಳು, ಅನಾಥರು ಮತ್ತು ಒಂಟಿ ಪೋಷಕರ ಮಕ್ಕಳನ್ನು ಆಯ್ಕೆ ಮಾಡಿ ಅನುಮತಿಯೊಂದಿಗೆ ತರಬೇತಿ ನೀಡಲಾಯಿತು.

ಶಾಸಕರ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ಎಸ್‌ಎಸ್‌ಎಲ್‌ಸಿ ಫಲಿತಾಂಶಗಳು ತೋರಿಸಿವೆ. ಶಾಸಕ ಪ್ರದೀಪ್ ಈಶ್ವರ್ ಅವರು ವಿದ್ಯಾರ್ಥಿಗಳನ್ನು ಖುದ್ದು ಭೇಟಿಯಾಗಿ ಯೋಜನೆಯಡಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾದವರನ್ನು ಅಭಿನಂದಿಸಿದರು.‘‘ಯಾವುದೇ ಕುಟುಂಬದ ಜೀವನಮಟ್ಟ ಅಭಿವೃದ್ಧಿಯಾಗಬೇಕು ಎಂದರೆ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಅಂಶವನ್ನು ಗುರುತಿಸಿ ಸೂಪರ್ 60 ಯೋಜನೆ ಆರಂಭಿಸಲಾಗಿದೆ ಎಂದರು.

3,000 ವಿದ್ಯಾರ್ಥಿಗಳಿಗೆ ಶಾಸಕರು 1,000 ರೂಪಾಯಿಗಳ ವಿದ್ಯಾರ್ಥಿವೇತನವನ್ನು ನೀಡಿದರು ಎಂದು ಅಕಾಡೆಮಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.