ರಾಜ್ಯ

ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಕಾರಣ ನಿಗೂಢ!

ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್‌ ವಕೀಲರಾದ ಚೈತ್ರಾಗೌಡ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಕಾರಣ ನಿಗೂಢ!
ಚೈತ್ರಾ ಗೌಡ
Published On :

ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್‌ ವಕೀಲರಾದ ಚೈತ್ರಾಗೌಡ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾಗೌಡ ಅವರು ಇಂದು ಸಂಜಯ್ ​ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವಪತ್ತೆ ಆಗಿದೆ

ಮನೆಯಲ್ಲಿ ಯಾವುದೇ ಡೆತ್​​ನೋಟ್ ಪತ್ತೆಯಾಗಿಲ್ಲ. ಹೀಗಾಗಿ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸಂಬಂಧ ಮೃತ ಚೈತ್ರಾ ಗೌಡ ಅವರ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.