ರಾಜ್ಯ

ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣ: ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ

ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬಿಜೆಪಿ ನಾಯಕ ಮತ್ತು ವಕೀಲ ಜೆ. ದೇವರಾಜೇಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಶನಿವಾರ ಒಪ್ಪಿಸಲಾಗಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣ: ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ದೇವರಾಜೇಗೌಡ
Published On :

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬಿಜೆಪಿ ನಾಯಕ ಮತ್ತು ವಕೀಲ ಜೆ. ದೇವರಾಜೇಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಶನಿವಾರ ಒಪ್ಪಿಸಲಾಗಿದೆ. ಶುಕ್ರವಾರ ತಡರಾತ್ರಿ ಚಿತ್ರದುರ್ಗ ಜಿಲ್ಲೆಯ ಗೂಳಿಹಾಲ್ ಟೋಲ್ ಗೇಟ್ ಬಳಿ ಅವರನ್ನು ಹಿರಿಯೂರು ಪೊಲೀಸರು ಬಂಧಿಸಿದ್ದರು. ನಂತರ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸರು ಅಲ್ಲಿಗೆ ತೆರಳಿ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಶನಿವಾರ ಬೆಳಗ್ಗೆ ಅವರನ್ನು ವಿಚಾರಣೆಗಾಗಿ ಅತ್ಯಾಚಾರ ಘಟನೆ ನಡೆದಿದೆ ಎನ್ನಲಾದ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಕರೆದೊಯ್ಯಲಾಯಿತು. ನಂತರ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಹಾಸನ ಜಿಲ್ಲೆಯ 36 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದೇವರಾಜೇಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಸ್ತಿ ಮಾರಾಟ ಮಾಡಲು ಸಹಾಯ ಮಾಡುವ ನೆಪದಲ್ಲಿ ತನಗೆ ಕಿರುಕುಳ ನೀಡಿ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಏಪ್ರಿಲ್ 1 ರಂದು ಅವರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಶುಕ್ರವಾರ, ಮಹಿಳೆ ಮತ್ತೊಮ್ಮೆ ಪೊಲೀಸರನ್ನು ಸಂಪರ್ಕಿಸಿದ್ದು, ಅವರಿಂದ ಅತ್ಯಾಚಾರವೆಸಗಿರುವುದಾಗಿ ಆರೋಪಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇವರಾಜೇಗೌಡ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್. ಡಿ. ರೇವಣ್ಣ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಳೆದ ವರ್ಷ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣವನ್ನು ಮೊದಲ ಬಾರಿಗೆ ಹೊರಗೆ ತಂದು, ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡದಂತೆ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿರುವುದಾಗಿ ಅವರು ಹೇಳಿಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.