ರಾಜ್ಯ

Prajwal Revanna case: HD ರೇವಣ್ಣ ಪತ್ನಿ ಭವಾನಿ ರೇವಣ್ಣಗೆ 2ನೇ ನೋಟಿಸ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

Prajwal Revanna case: HD ರೇವಣ್ಣ ಪತ್ನಿ ಭವಾನಿ ರೇವಣ್ಣಗೆ 2ನೇ ನೋಟಿಸ್‌
ಭವಾನಿ ರೇವಣ್ಣ
Published On :

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಶನಿವಾರ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾತ್ರವಲ್ಲದೇ ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ತಂಡ ಸಿದ್ಧವಾಗಿದೆ. ಆದರೆ, ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.