ರಾಜ್ಯ

ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣ: ಚುನಾವಣೆ ಪೂರ್ಣಗೊಂಡ ಬಳಿಕ ಸಿಐಡಿ ತನಿಖೆ ಸಾಧ್ಯತೆ?

ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿ ಪ್ರಕರಣದಲ್ಲಿ ಕೇಳಿ ಬಂದಿರುವ ಭ್ರಷ್ಟಾಚಾರ ಪ್ರಕರಣವನ್ನು ಲೋಕಸಭಾ ಚುನಾವಣೆ ಬಳಿಕ ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆಗಳಿವೆ...

ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣ: ಚುನಾವಣೆ ಪೂರ್ಣಗೊಂಡ ಬಳಿಕ ಸಿಐಡಿ ತನಿಖೆ ಸಾಧ್ಯತೆ?
ಪಿಎಸ್‌ಐ
Published On :

ಬೆಂಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿ ಪ್ರಕರಣದಲ್ಲಿ ಕೇಳಿ ಬಂದಿರುವ ಭ್ರಷ್ಟಾಚಾರ ಪ್ರಕರಣವನ್ನು ಲೋಕಸಭಾ ಚುನಾವಣೆ ಬಳಿಕ ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆಗಳಿವೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಹಗರಣ ನಡೆದಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನ್ಯಾಯಾಂಗ ತನಿಖೆಯನ್ನು ರಚಿಸಿತು, ತನಿಖೆಯಲ್ಲಿ ಭ್ರಷ್ಟಾಚಾರವನ್ನು ನಡೆದಿರುವಪುದು ಸಾಬೀತಾಗಿದ್ದು, ಕ್ರಿಮಿನಲ್ ತನಿಖೆಗೆ ಶಿಫಾರಸು ಮಾಡಿದೆ.

ಕಳೆದ ಸಂಪುಟ ಸಭೆಯ (ಚುನಾವಣಾ ನೀತಿ ಸಂಹಿತೆ ಮೊದಲು) ಮುಂದೆ ಈ ಕುರಿತ ವರದಿಯನ್ನು ಇರಿಸಲಾಗಿತ್ತು. ವರದಿಯು ಭ್ರಷ್ಟಾಚಾರ ಮತ್ತು ರಾಜಕಾರಣಿಗಳ ಒಳಗೊಳ್ಳುವಿಕೆಯನ್ನು ದೃಢಪಡಿಸಿದೆ. ಆಯೋಗವು ಶಾಸಕರನ್ನು ಕರೆಸುವ ಅಧಿಕಾರವನ್ನು ಹೊಂದಿಲ್ಲ. ಹೀಗಾಗಿ ಕ್ರಿಮಿನಲ್ ತನಿಖೆಗೆ ಶಿಫಾರಸು ಮಾಡಿದೆ ಎಂದು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.