ರಾಜ್ಯ

ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ

ನಗರದ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯದಲ್ಲಿ ತಂದೆ ಜತೆ ಕಾರು ತೊಳೆಯುವಾಗ 15 ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್‌ ತುಳಿದಿದ್ದರ ಪರಿಣಾಮ ಮನೆಯಾಂಗಳದಲ್ಲಿ ಆಟವಾಡುತ್ತಿದ್ದ 5 ವರ್ಷದ ಮಗುವಿನ ಮೇಲೆ ಕಾರು ಹರಿದು ಮೃತಪಟ್ಟಿದೆ.

ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ಅಪಘಾತದಲ್ಲಿ 5 ಮಗು ಆರವ್ ಸಾವು
Published On :

ಬೆಂಗಳೂರು: ನಗರದ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯದಲ್ಲಿ ತಂದೆ ಜತೆ ಕಾರು ತೊಳೆಯುವಾಗ 15 ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್‌ ತುಳಿದಿದ್ದರ ಪರಿಣಾಮ ಮನೆಯಾಂಗಳದಲ್ಲಿ ಆಟವಾಡುತ್ತಿದ್ದ 5 ವರ್ಷದ ಮಗುವಿನ ಮೇಲೆ ಕಾರು ಹರಿದು ಮೃತಪಟ್ಟಿದೆ.

ಈ ಸಣ್ಣ ನಿರ್ಲಕ್ಷ್ಯದಲ್ಲಿ ಐದು ವರ್ಷ ಮಗು ಆರವ್ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ಈ ದುರಂತ ನಡೆದಿದೆ.

ಕಾರಿನ ಡ್ರೈವಿಂಗ್‌ ಸೀಟ್‌ನಲ್ಲಿ ಕುಳಿತಿದ್ದ 15 ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್ ತುಳಿದಿದ್ದಾನೆ. ಪರಿಣಾಮ ಕಾರು ರಭಸವಾಗಿ ಮುನ್ನುಗಿದೆ. ಆ ಸಂದರ್ಭದಲ್ಲಿ ರಸ್ತೆಯಲ್ಲಿ ಆಡುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿದೆ. ಕಾರು ಗುದ್ದಿದ ರಭಸಕ್ಕೆ ಆರವ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಮೃತದೇಹವನ್ನು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.