ರಾಜ್ಯ

ತುಮಕೂರು: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ

ತುಮಕೂರು ಜಿಲ್ಲೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಹೆತ್ತ ಮಗಳ‌ ಮೇಲೆಯೇ ಕಾಮುಕ ತಂದೆ ಆತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ನಡೆದಿದೆ.

ತುಮಕೂರು: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ
ಸಂಗ್ರಹ ಚಿತ್ರ
Published On :

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಹೆತ್ತ ಮಗಳ‌ ಮೇಲೆಯೇ ಕಾಮುಕ ತಂದೆ ಆತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ನಡೆದಿದೆ.

13 ವರ್ಷದ ಅಪ್ರಾಪ್ತೆ ಮಗಳ ಮೇಲೆ ಆತ್ಯಾಚಾರ ನಡೆಸಿ ತಂದೆ ಪರಾರಿಯಾಗಿದ್ದಾನೆ. ಈ ಹಿಂದೆಯೂ ಒಮ್ಮೆ ಮಗಳ‌ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.

ಘಟನೆ ಕುರಿತು ತಾಯಿಯಿಂದ ತಿಪಟೂರು ನಗರ ಠಾಣೆಗೆ ದೂರು ನೀಡಲಾಗಿದೆ. ತಾಯಿಯ ದೂರಿನ ಅನ್ವಯ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಕೊಂಡಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ತಿಪಟೂರು ‌ನಗರ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.