Prajwal Revanna case: 'ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ': ಕುಮಾರಸ್ವಾಮಿಗೆ ಜಿ ಪರಮೇಶ್ವರ್!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನೂ ವಿಚಾರಣೆಗೊಳಪಡಿಸಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನೂ ವಿಚಾರಣೆಗೊಳಪಡಿಸಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, 'ರಾಜಕೀಯ ನಾಯಕರು ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಅಥವಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಹಂಚಿಕೊಳ್ಳುವಾಗ ಎಚ್ಚರದಿಂದಿರಬೇಕು. ಇದು ಸೂಕ್ಷ್ಮ ವಿಚಾರವಾಗಿದ್ದು, ಜವಾಬ್ದಾರಿ ಅರಿತು ಮಾತನಾಡಬೇಕು.
ಹೆಚ್ ಡಿ ಕುಮಾರಸ್ವಾಮಿ ಅವರು ಮಾಜಿ ಸಿಎಂ ಆಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದ ಕುರಿತು ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಸಾರ್ವಜನಿಕವಾಗಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಜಾಗರೂಕರಾಗಿರಬೇಕು ಮತ್ತು ಇದು ಎಲ್ಲರಿಗೂ ಅನ್ವಯಿಸುತ್ತದೆ ಎಂದರು.
ಅಂತೆಯೇ ಮಾತನಾಡುವಾಗ ಈ ಬಗ್ಗೆ ಎಚ್ಚರಿಕೆ ಇರಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಕಾನೂನು ಪ್ರಕಾರ ನಿಮ್ಮನ್ನೂ ಕರೆಸಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
'ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಯಾರೋ, ಏನೇನನ್ನೋ ಹೇಳುತ್ತಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗಳಿಗೆ ನಾವು ಉತ್ತರ ಕೊಡುವುದಕ್ಕೆ ಆಗಲ್ಲ. ಇದು ಗಂಭೀರವಾದ ಪ್ರಕರಣ ಆಗಿರುವುದರಿಂದ ಇದರ ತನಿಖೆ ಪೂರ್ಣಗೊಳ್ಳುವವರೆಗೂ ಕೂಡ ಯಾವುದೇ ಮಾಹಿತಿಯನ್ನು ಸಾರ್ವಜನಿಕ ವಲಯಕ್ಕೆ ತಿಳಿಸಲು ಆಗುವುದಿಲ್ಲ.
ಈ ಕೇಸ್ ಬಗ್ಗೆ ಸಾರ್ವಜನಿಕರಾಗಲೀ ಅಥವಾ ರಾಜಕೀಯ ನಾಯಕರಾಗಾಲೀ, ಯಾವುದೇ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ಮೇಲೆಯೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ 41A ಪ್ರಕಾರ ಅವರನ್ನು ಕೂಡ ವಿಚಾರಣೆಗೆ ಕರೆಯಬೇಕಾಗುತ್ತದೆ.
ಎಚ್.ಡಿ. ಕುಮಾರಸ್ವಾಮಿ ಪದೇ ಪದೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ವಿಷಯವನ್ನು ಅವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



