CBSE results: 10, 12ನೇ ತರಗತಿ ಫಲಿತಾಂಶದಲ್ಲಿ ಬೆಂಗಳೂರಿಗೆ ನಾಲ್ಕನೇ ಸ್ಥಾನ

ಬೆಂಗಳೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 12 ಮತ್ತು 10ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿದ್ದು, ಬೆಂಗಳೂರು ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
ರಾಜಧಾನಿ ಬೆಂಗಳೂರಿನಲ್ಲಿ 12 ನೇ ತರಗತಿಯ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣವು ಶೇಕಡಾ 87.98 ಮತ್ತು 10 ನೇ ತರಗತಿಯ ಉತ್ತೀರ್ಣ ಶೇಕಡಾ 93.60 ಆಗಿದೆ. ದೇಶದ 17 ಪ್ರಾಂತ್ಯಗಳಲ್ಲಿ ಬೆಂಗಳೂರು 12 ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 96.95 ರಷ್ಟು ಉತ್ತೀರ್ಣರಾಗುವುದರೊಂದಿಗೆ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ತಿರುವನಂತಪುರವು ಅತ್ಯಧಿಕ ಶೇಕಡಾ 99.91 ನ್ನು ದಾಖಲಿಸಿದೆ.
12ನೇ ತರಗತಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 16.33 ಲಕ್ಷ ವಿದ್ಯಾರ್ಥಿಗಳ ಪೈಕಿ 16.21 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 14.26 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮತ್ತೆ, ಬಾಲಕರಿಗಿಂತ ಬಾಲಕಿಯರೇ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಪರೀಕ್ಷೆಯಲ್ಲಿ ಉತ್ತೀರ್ಣದಲ್ಲಿ ಬಾಲಕರು ಶೇಕಡಾ 85.12 ಕ್ಕೆ ಹೋಲಿಸಿದರೆ ಬಾಲಕಿಯರು ಶೇಕಡಾ 91.52 ಶೇಕಡಾವನ್ನು ದಾಖಲಿಸಿದ್ದಾರೆ. ಒಟ್ಟಾರೆಯಾಗಿ, 1.16 ಲಕ್ಷ ವಿದ್ಯಾರ್ಥಿಗಳು ಶೇಕಡಾ 90ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದರೆ, 24,068ರಷ್ಟು ವಿದ್ಯಾರ್ಥಿಗಳು ಶೇಕಡಾ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ.
10ನೇ ತರಗತಿ ಪರೀಕ್ಷೆಯಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳು ಶೇ 99.26ರಷ್ಟು ಉತ್ತೀರ್ಣರಾಗುವ ಮೂಲಕ ನಾಲ್ಕನೇ ಸ್ಥಾನ ಗಳಿಸಿದೆ. ಇಲ್ಲಿಯೂ ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕಿಯರ 92.71 ಕ್ಕೆ ಹೋಲಿಸಿದರೆ ಹುಡುಗಿಯರು 94.75 ಶೇಕಡಾವನ್ನು ದಾಖಲಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕೀಳರಿಮೆ ಅಥವಾ ಹೋಲಿಕೆ ಬರಬಾರದು ಎಂದು CBSE ಯಾವುದೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡುವುದನ್ನು ಅಥವಾ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ಅಥವಾ ಮೂರನೇ ಸ್ಥಾನ ನೀಡುವುದನ್ನು ತಡೆಯುತ್ತದೆ. ಆದಾಗ್ಯೂ, ಮಂಡಳಿಯು ಅತ್ಯಧಿಕ ಅಂಕಗಳನ್ನು ಗಳಿಸಿದ್ದಕ್ಕಾಗಿ ಮೆರಿಟ್ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಉನ್ನತ ಶೇಕಡಾ 0.1 ವಿದ್ಯಾರ್ಥಿಗಳನ್ನು ಗುರುತಿಸಿದೆ. ಈ ಪ್ರಮಾಣಪತ್ರಗಳನ್ನು ವಿದ್ಯಾರ್ಥಿಗಳ ಡಿಜಿ-ಲಾಕರ್ ಖಾತೆಗಳಿಂದ ತೆಗೆದುಕೊಳ್ಳಬಹುದು.
ಅಂಕಗಳನ್ನು ಪರಿಶೀಲಿಸಲು, ವಿದ್ಯಾರ್ಥಿಗಳು ತಮ್ಮ ಉತ್ತರ ಪುಸ್ತಕಗಳ ಪ್ರತಿಗಾಗಿ (ಸ್ಕ್ಯಾನ್ ಮಾಡಿದ ಪ್ರತಿಗಳು) ಅರ್ಜಿ ಸಲ್ಲಿಸಬಹುದು. ಫಲಿತಾಂಶಗಳಿಂದ ಅತೃಪ್ತರಾಗಿದ್ದರೆ, ಮರು-ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು.
ಈ ಆಯ್ಕೆಗಳು ಆನ್‌ಲೈನ್‌ನಲ್ಲಿ ಮಾತ್ರ ಲಭ್ಯವಿದೆ. ಈ ಕುರಿತು ಮಂಡಳಿಯು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



