ರಾಜ್ಯ

ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ; ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ನಟ ಚೇತನ್ ಚಂದ್ರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಭಾನುವಾರ ರಾತ್ರಿ ಆರು ಜನರ ತಂಡ ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಚೇತನ್ ಚಂದ್ರ ಅವರು ಕಗ್ಗಲಿಪುರ ಪೊಲೀಸರಿಗೆ ದೂರು ನೀಡಿದ್ದರು.

ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ; ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
Published On :

ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಭಾನುವಾರ ರಾತ್ರಿ ಆರು ಜನರ ತಂಡ ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಚೇತನ್ ಚಂದ್ರ ಅವರು ಕಗ್ಗಲಿಪುರ ಪೊಲೀಸರಿಗೆ ದೂರು ನೀಡಿದ್ದರು.

ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದರು. ದುಡ್ಡು ಕೇಳಿದರು. ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್‌ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಹೇಳಿದ್ದಾರೆ.

ಬೈಕ್ ಚಾಲಕ ಕುಡಿದಿದ್ದ ಮತ್ತು ನಟನ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ. ನಟ ವಾಹನ ಚಾಲಕನನ್ನು ತಡೆದು ವಿಚಾರಿಸಿದಾಗ ಆರು ಮಂದಿ ದುಷ್ಕರ್ಮಿಗಳ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ದಾಳಿಯ ನಂತರ ಚಂದ್ರು ಕಗ್ಗಲಿಪುರ ಪೊಲೀಸ್ ಠಾಣೆಗೆ ಧಾವಿಸಿದರು. ಅಲ್ಲಿಂದ ಅಧಿಕಾರಿಗಳು ಅವರನ್ನು ಪ್ರಥಮ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ನಟನ ಮೂಗು ಮತ್ತು ಮುಖಕ್ಕೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಭಾರಿ ರಕ್ತಸ್ರಾವವಾಗಿದೆ. ಅವರ ಮೇಕಪ್ ಕಲಾವಿದ ಮತ್ತು ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.