ಕೊಡಗು: ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿ, ಸ್ಥಳಾಂತರ
ಮನುಷ್ಯ ವಾಸಸ್ಥಳಕ್ಕೆ ನುಗ್ಗಿದ್ದ ಕಾಡಾನೆಗೆ ರೇಡಿಯೋ ಕಾಲರ್ ಅವಳಡಿಕೆ ಮಾಡಲಾಗಿದ್ದು, ಅದನ್ನು ಮರು ಸ್ಥಳಾಂತರ ಮಾಡಲಾಗಿದೆ.

ಕೊಡಗು: ಮನುಷ್ಯ ವಾಸಸ್ಥಳಕ್ಕೆ ನುಗ್ಗಿದ್ದ ಕಾಡಾನೆಗೆ ರೇಡಿಯೋ ಕಾಲರ್ ಅವಳಡಿಕೆ ಮಾಡಲಾಗಿದ್ದು, ಅದನ್ನು ಮರು ಸ್ಥಳಾಂತರ ಮಾಡಲಾಗಿದೆ.
ವಿರಾಜಪೇಟೆ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದು, ರೇಡಿಯೋ ಕಾಲರ್ ಅಳವಡಿಕೆ ಮಾಡಿದ್ದ ಆನೆಯನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಶೀಘ್ರವೇ ಸ್ಥಳಾಂತರಿಸಲಾಗುತ್ತದೆ.
ಈ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚಿನ ಅರಣ್ಯ ಸಿಬ್ಬಂದಿಗಳು ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಇನ್ನೂ 2 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ.
ಕಳೆದ 4 ತಿಂಗಳ ಹಿಂದೆ ಜಿಲ್ಲೆಯ ಎಸ್ಟೇಟ್ ನಲ್ಲಿ ಮಹಿಳಾ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಅದಷ್ಟೇ ಅಲ್ಲದೇ ಆಸ್ತಿ ಹಾನಿಯೂ ಸಂಭವಿಸಿದ್ದರಿಂದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಹೆಚ್ಚಿನ ಒತ್ತಡ ಇತ್ತು.
ಆನೆಗೆ ದಕ್ಷ ಎಂದು ನಾಮಕರಣ ಮಾಡಲಾಗಿದ್ದು ಅದನ್ನು ಸೆರೆಹಿಡಿಯಲು ಮತ್ತು ರೇಡಿಯೊ ಕಾಲರ್ ಮಾಡಲು ಇಲಾಖೆ ಅನುಮತಿಯನ್ನು ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



