ರಾಜ್ಯ

'ತಾಯಿ ಚಾಮುಂಡಿಗೆ ಎಲ್ಲವನ್ನೂ ಬಿಟ್ಟಿದ್ದೇನೆ': ಪುತ್ರ ಪ್ರಜ್ವಲ್ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿ ರೇವಣ್ಣ

ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ನಿನ್ನೆ ಮಂಗಳವಾರ ಜೈಲಿನಿಂದ ಬಿಡುಗಡೆ ಆಗಿ ತಮ್ಮ ತಂದೆ ಹೆಚ್ ಡಿ ದೇವೇಗೌಡ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಕಾಲಿಗೆ ನಮಸ್ಕರಿಸಿ ಮಾತುಕತೆ ನಡೆಸಿದ ನಂತರ ಸಾಯಂಕಾಲ ಟೆಂಪಲ್ ರನ್ ನಡೆಸಿದ್ದಾರೆ.

'ತಾಯಿ ಚಾಮುಂಡಿಗೆ ಎಲ್ಲವನ್ನೂ ಬಿಟ್ಟಿದ್ದೇನೆ': ಪುತ್ರ ಪ್ರಜ್ವಲ್ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿ ರೇವಣ್ಣ
ಹೆಚ್ ಡಿ ರೇವಣ್ಣ
Published On :

ಮೈಸೂರು: ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ನಿನ್ನೆ ಮಂಗಳವಾರ ಜೈಲಿನಿಂದ ಬಿಡುಗಡೆ ಆಗಿ ತಮ್ಮ ತಂದೆ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಕಾಲಿಗೆ ನಮಸ್ಕರಿಸಿ ಮಾತುಕತೆ ನಡೆಸಿದ ನಂತರ ಸಾಯಂಕಾಲ ಟೆಂಪಲ್ ರನ್ ನಡೆಸಿದ್ದಾರೆ.

ಬಸವನಗುಡಿಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತದನಂತರ ಬನಶಂಕರಿಯ ತಮ್ಮ ನಿವಾಸಕ್ಕೆ ಆಗಮಿಸಿ ಅಲ್ಲಿಯೂ ಸಹ ದೇವರ ಪ್ರಾರ್ಥನೆ ಮಾಡಿದರು. ಬಳಿಕ ಅಲ್ಲಿಂದ ನೇರವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದರು. ಕುಟುಂಬದ ಪ್ರತಿಯೊಬ್ಬರ ಹೆಸರು ಹಾಗೂ ನಕ್ಷತ್ರ ಹೇಳಿ ಅರ್ಚನೆ ಮಾಡಿಸಿದರು. ಬಳಿಕ ದೇವಾಲಯದಲ್ಲಿ ಸುಮಾರು ಹತ್ತು ನಿಮಿಷಗಳ ಕಾಲ ಏಕಾಂಗಿಯಾಗಿ ಕುಳಿತು ದೇವಿಗೆ ಪ್ರಾರ್ಥನೆ ಮಾಡಿದರು.

ತಾಯಿ ಚಾಮುಂಡಿಗೆ ಎಲ್ಲವನ್ನೂ ಬಿಟ್ಟು ಬಿಟ್ಟೀದ್ದೀನಿ: ದೇಗುಲದಿಂದ ಹೊರಬಂದು ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸಿದಾಗ, ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ಈ ಬಗ್ಗೆ ಮಾತನಾಡುವುದಿಲ್ಲ. ನನಗೆ ನ್ಯಾಯಾಂಗದ ಮೇಲೆ ಗೌರವವಿದೆ. ತಾಯಿ ಚಾಮುಂಡಿಯ ದರ್ಶನ ಮಾಡಿದ್ದೇನೆ. ನನಗೆ ದೇವರು ಮತ್ತು ಈ ರಾಜ್ಯದ ಜನತೆ ಮೇಲೆ ನಂಬಿಕೆಯಿದೆ ಎಂದರು.

40 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಇದೇ ಮೊದಲು ನ್ಯಾಯಾಲಯದಲ್ಲಿ ನನ್ನ ಕೇಸು ದಾಖಲಾಗಿರುವುದು. ನ್ಯಾಯಾಂಗದ ಮೇಲೆ ನಂಬಿಕೆಯಿರಿಸಿದ್ದೇನೆ. ತಾಯಿ ಚಾಮುಂಡೇಶ್ವರಿಗೆ ಎಲ್ಲವನ್ನೂ ಬಿಟ್ಟಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.