ರಾಜ್ಯ

ಪ್ರಜ್ವಲ್ ರೇವಣ್ಣ ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ: ಜಿ.ಟಿ. ದೇವೇಗೌಡ

ಪ್ರಜ್ವಲ್ ಮೇಲೆ ಆರೋಪ ಕೇಳಿಬಂದಲ್ಲಿಂದ ಪಕ್ಷದಿಂದ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಬೇಕೋ ಅನ್ನು ನಾವು ಸೂಕ್ತ ಸಮಯದಲ್ಲಿ ಮಾಡಿದ್ದೇವೆ. ಇನ್ನು ಏನಿದ್ದರೂ ಸರ್ಕಾರದ ಕೆಲಸ, ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದ್ದಾರೆ ಎಂದು ಜಿ ಟಿ ದೇವೇಗೌಡ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ: ಜಿ.ಟಿ. ದೇವೇಗೌಡ
ಜಿ ಟಿ ದೇವೇಗೌಡ
Published On :

ಬೆಂಗಳೂರು: ವಿದೇಶಕ್ಕೆ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ ಅನ್ನೋದು ಅವ್ರ ಮನೆಯವರಿಗೂ ಗೊತ್ತಿಲ್ಲ ನಮಗೂ ಗೊತ್ತಿಲ್ಲ. ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅವರು ಬಂದ ಮೇಲೆಯೇ ನಮಗೆ ಸಹ ಅವರ ಬಗ್ಗೆ ಮಾಹಿತಿ ತಿಳಿಯಲಿದೆ ಎಂದರು.

ಪ್ರಜ್ವಲ್ ಮೇಲೆ ಆರೋಪ ಕೇಳಿಬಂದಲ್ಲಿಂದ ಪಕ್ಷದಿಂದ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಬೇಕೋ ಅನ್ನು ನಾವು ಸೂಕ್ತ ಸಮಯದಲ್ಲಿ ಮಾಡಿದ್ದೇವೆ. ಇನ್ನು ಏನಿದ್ದರೂ ಸರ್ಕಾರದ ಕೆಲಸ, ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದ್ದಾರೆ, ವಿಚಾರಣೆ ಮಾಡುತ್ತಾರೆ ಎಂದರು.

ಟಿಕೆಟ್ ಕ್ಯಾನ್ಸಲ್ ಮಾಡಿ ಮತ್ತೆ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ: ಇಂದು ಮೇ 15ಕ್ಕೆ ಜರ್ಮನ್​​​​ನ ಮ್ಯೂನಿಚ್​​ನಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಈ ಟಿಕೆಟ್ ನ್ನು ಕ್ಯಾನ್ಸಲ್ ಮಾಡಿದ್ದ ಅವರು, ಮತ್ತೆ ಬುಕ್ ಮಾಡಿದ್ದಾರೆ. ಇಂದು ಮಧ್ಯರಾತ್ರಿ 2 ಗಂಟೆಗೆ ಬ್ಯುಸ್ ನೆಲ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆಂದು ತಿಳಿದುಬಂದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿರಿಸಿದ್ದಾರೆ.

ಶೃಂಗೇರಿಗೆ ಇಂದು ಹೆಚ್ ಡಿ ರೇವಣ್ಣ: ಈ ಎಲ್ಲಾ ಗೊಂದಲ, ಪ್ರಕರಣಗಳ ಮಧ್ಯೆ ಪ್ರಜ್ವಲ್ ತಂದೆ ಶಾಸಕ ಹೆಚ್ ಡಿ ರೇವಣ್ಣ ಇಂದು ಶೃಂಗೇರಿ ಶಾರದಾಂಬೆ ಸನ್ನಿಧಿ ದರ್ಶನ ಮಾಡಲಿದ್ದಾರೆ. ಇದೇ ಪ್ರಕರಣದಲ್ಲಿ ಜೈಲುಪಾಲಾಗಿದ್ದ ರೇವಣ್ಣ ನಿನ್ನೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿ ಸಂಜೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.