ಹಣ ಹೂಡಿಕೆ ಮಾಡಲು ದಂಪತಿಗೆ ವಂಚನೆ: ಹಣಕಾಸು ಸಂಸ್ಥೆ ಮ್ಯಾನೇಜರ್ ಗೆ 21 ಲಕ್ಷ ರೂ ದಂಡ, 5 ವರ್ಷ ಶಿಕ್ಷೆ
ಪೋಂಜಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿ ದಂಪತಿಯನ್ನು ವಂಚಿಸಿದ ಆರೋಪದ ಮೇಲೆ ಫಾಸ್ಟರ್‌ಫಿನ್ ಕ್ಯಾಪಿಟಲ್ ಮ್ಯಾನೇಜ್‌ಮೆಂಟ್‌ನ ಪಾಲುದಾರ ಮೊಹಮ್ಮದ್ ಇಧರೀಸ್‌ಗೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 21 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರು: ಪೋಂಜಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿ ದಂಪತಿಯನ್ನು ವಂಚಿಸಿದ ಆರೋಪದ ಮೇಲೆ ಫಾಸ್ಟರ್‌ಫಿನ್ ಕ್ಯಾಪಿಟಲ್ ಮ್ಯಾನೇಜ್‌ಮೆಂಟ್‌ನ ಪಾಲುದಾರ ಮೊಹಮ್ಮದ್ ಇಧರೀಸ್‌ಗೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 21 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಐಪಿಸಿ ಸೆಕ್ಷನ್ 420 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (KPIDFE) ಕಾಯಿದೆ, 2004 ರ ಸೆಕ್ಷನ್ 9 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಇಧರೀಸ್ ನನ್ನು ದೋಷಿ ಎಂದು ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ತೀರ್ಪು ನೀಡಿದರು.
ದೂರುದಾರರಾದ ಅರುಣ್ ಕುಮಾರ್ ಅವರ ಪತ್ನಿ ಗೀತಾ ಅವರು 2013 ರಲ್ಲಿ ಆರ್‌ಟಿಜಿಎಸ್ ಮೂಲಕ 20 ಲಕ್ಷ ರೂಪಾಯಿಗಳನ್ನು ಇದರೀಸ್ ಅವರ ಖಾತೆಗೆ ವರ್ಗಾಯಿಸಿದ್ದರು. ಅವರು ಸಂಸ್ಥೆಯನ್ನು ನೋಂದಾಯಿಸುವ ಮೊದಲೇ ಅವರಿಗೆ ಶೇಕಡಾ 15ರ ಬಡ್ಡಿಯ ಭರವಸೆಯೊಂದಿಗೆ ಆಮಿಷವೊಡ್ಡಿ ವಂಚಿಸಿದ್ದರು.
ತರುವಾಯ, ಅವರು ತಮ್ಮ ಸಂಸ್ಥೆಯಾದ ಫಾಸ್ಟರ್‌ಫಿನ್ ಕ್ಯಾಪಿಟಲ್ ಮ್ಯಾನೇಜ್‌ಮೆಂಟ್ ಹೆಸರಿನಲ್ಲಿ ‘ವೆಲ್ತ್ ಮ್ಯಾನೇಜ್‌ಮೆಂಟ್ ಅಗ್ರಿಮೆಂಟ್’ ನ್ನು ಸಹ ಮಾಡಿಕೊಂಡರು, ಅದರ ಮೂಲಕ ಅವರು ಲಾಭವನ್ನು ಹಂಚಿಕೊಳ್ಳಲು ಒಪ್ಪಿಕೊಂಡಿದ್ದರು. ಆದರೆ ಮಾಡಿಕೊಂಡ ಒಪ್ಪಂದದಂತೆ ನಡೆದುಕೊಳ್ಳಲಿಲ್ಲ.
ಸಾಮಾಜಿಕ-ಆರ್ಥಿಕ ಅಪರಾಧದ ಪ್ರಮುಖ ಅಂಶವು ಸಮಾಜಕ್ಕೆ ಹಾನಿಯನ್ನುಂಟುಮಾಡುವ ದೃಷ್ಟಿಯಿಂದ ಪರಿಗಣಿಸಬೇಕು ಎಂದು ಗಮನಿಸಿದ ನ್ಯಾಯಾಲಯವು ಗೀತಾಗೆ ವಿಧಿಸಲಾದ 21 ಲಕ್ಷ ರೂಪಾಯಿಗಳ ದಂಡದ ಪೈಕಿ 20.50 ಲಕ್ಷ ರೂಪಾಯಿ ಪರಿಹಾರ ಮೊತ್ತ ನೀಡುವಂತೆ ಹೇಳಿದ್ದು ಉಳಿದ ಮೊತ್ತವನ್ನು ರಾಜ್ಯಕ್ಕೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಿದೆ.
ಸಾರ್ವಜನಿಕರನ್ನು ವಂಚಿಸುವ ವಂಚಕರನ್ನು ಶಿಕ್ಷಿಸುವುದೇ ಕೆಪಿಐಡಿಎಫ್‌ಇ ಕಾಯ್ದೆಯ ಏಕೈಕ ಉದ್ದೇಶವಾಗಿದೆ ಎಂದು ಸಲ್ಲಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ ಅನುಪಮಾ, ಆರ್ಥಿಕ ಅಪರಾಧಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ವಾದಿಸಿದರು. ಪ್ರಾಸಿಕ್ಯೂಷನ್ ತನ್ನ ಅಪ್ರಾಮಾಣಿಕ ಉದ್ದೇಶವನ್ನು ಸಹ ಸ್ಥಾಪಿಸಿದೆ ಎಂದು ನ್ಯಾಯಾಲಯವು ಗಮನಿಸಿದೆ. ಆರಂಭದಲ್ಲಿ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಂತರ ಅದನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



