ಕನ್ನಡಿಗರ ತೆರಿಗೆ ಹಣ ಲೂಟಿ ಹೊಡೆದ ಸರ್ಕಾರ ಸಿಕ್ಕಿಬಿದ್ದಿದೆ: ಪರಿಷತ್ ಚುನಾವಣೆಯಲ್ಲಿ ಅಕ್ರಮದ ಆರೋಪ ಮಾಡಿದ ಬಿಜೆಪಿ!
ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪ ಮಾಡಿದೆ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪ ಮಾಡಿದೆ.
ಮತದಾರರಿಗೆ ಹಂಚಲು ತಂದಿದ್ದು ಎನ್ನಲಾದ ವಸ್ತುಗಳಿದ್ದ ವೀಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.
ಕನ್ನಡಿಗರ ತೆರಿಗೆಯನ್ನು ಲೂಟಿ ಹೊಡೆದ #ATMSarkara ಅದನ್ನು ಅದನ್ನು ಚುನಾವಣೆಗಳಲ್ಲಿ ಅಕ್ರಮವಾಗಿ ಹಂಚಲು ಹೋಗಿ ಸಿಕ್ಕಿಬಿದ್ದಿದೆ ಎಂದು ಬಿಜೆಪಿ ಟ್ವಿಟರ್ ಖಾತೆಯಲ್ಲಿ ಬರೆದಿದೆ.
"ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿ ಗೌಡ ಅವರು ಸುಮಾರು 20 ಸಾವಿರಕ್ಕೂ ಅಧಿಕ ಉಡುಗೊರೆಗಳನ್ನು ಕೊರಿಯರ್ ಮೂಲಕ ಕಳಿಸಲು ಸಂಚು ರೂಪಿಸಿದ್ದರು ವಿದ್ಯಾವಂತ ಪದವೀಧರರಿಗೆ ಆಮಿಷ ಒಡ್ಡಿ ಮತ ಕೇಳುವಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾ ಆಯೋಗ ಕೂಡಲೇ ಅಸಿಂಧುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



