ರಾಜ್ಯ

ರಾಮನಗರಕ್ಕೆ ಹೇಮಾವತಿ ನಾಲೆ ನೀರು; ಡಿಕೆಶಿ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನಾಲೆಯ ನೀರನ್ನು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ ಮೂಲಕ ರಾಮನಗರಕ್ಕೂ ತಿರುಗಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಕಾಮಗಾರಿಯನ್ನೂ ಆರಂಭಿಸಿದೆ. ಯೋಜನೆಯನ್ನು ವಿರೋಧಿಸಿ ಗುಬ್ಬಿ ತಾಲೂಕಿನಲ್ಲಿ ಬಿಜೆಪಿ ನಾಯಕರು ಗುರುವಾರ ಪ್ರತಿಭಟನೆ ನಡೆಸಿದರು.

ರಾಮನಗರಕ್ಕೆ ಹೇಮಾವತಿ ನಾಲೆ ನೀರು; ಡಿಕೆಶಿ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಯೋಜನೆ ವಿರೋಧಿಸಿ ಗುಬ್ಬಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ
Published On :

ತುಮಕೂರು: ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನಾಲೆಯ ನೀರನ್ನು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ ಮೂಲಕ ರಾಮನಗರಕ್ಕೂ ತಿರುಗಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಕಾಮಗಾರಿಯನ್ನೂ ಆರಂಭಿಸಿದೆ. ಯೋಜನೆಯನ್ನು ವಿರೋಧಿಸಿ ಗುಬ್ಬಿ ತಾಲೂಕಿನಲ್ಲಿ ಬಿಜೆಪಿ ನಾಯಕರು ಗುರುವಾರ ಪ್ರತಿಭಟನೆ ನಡೆಸಿದರು.

ಮಾಜಿ ಸಚಿವ ಸೊಗಡು ಶಿವಣ್ಣ, ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ, ಶಾಸಕ ಜಿ.ಬಿ.ಜ್ಯೋತಿಗಣೇಶ್, ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಜಿಲ್ಲೆಯ ಧರ್ಮಗುರುಗಳು ಹಾಗೂ ಸಾವಿರಾರು ರೈತರು ಡಿ.ರಾಂಪುರ ಗ್ರಾಮಕ್ಕೆ ಮುತ್ತಿಗೆ ಹಾಕಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನೀರನ್ನು ಹಾಸನ ಜಿಲ್ಲೆಯ ಗೊರೂರು ಜಲಾಶಯದಿಂದ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರಕ್ಕೆ ಹರಿಸುವ ಯೋಜನೆಗೆ ಮಂಜೂರಾತಿ ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆರೋಪಿಸಿದರು,

ಅಂದಾಜು 1,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗೆ 2018 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಅನುಮತಿ ನೀಡಲಾಗಿದ್ದು, 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕಾಮಗಾರಿ ಆರಂಭವಾಗಿದೆ.

ಹೇಮಾವತಿ ನೀರಿಗಾಗಿ ಈ ಹಿಂದೆ ಹೋರಾಟಗಳು ನಡೆದಿದ್ದವು. ನಿರಂತಕ ಹೋರಾಟದ ಫಲವಾಗಿ ಜಿಲ್ಲೆಗೆ ಹೇಮಾವತಿ ಎಡದಂಡೆ ನಾಲೆಯ ಮೂಲಕ 24.5 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಜಿಲ್ಲೆ ನೀರು ಪಡೆಯುತ್ತಿದೆ. ಆದರೆ, ಈಗ ನಮ್ಮ ನೀರನ್ನು ಕಿತ್ತುಕೊಳ್ಳುವ ಯೋಜನೆ ರೂಪಿಸಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಅಧಿಕಾರದ ದರ್ಪ ಮೆರೆದಿದ್ದಾರೆ. ಜಿಲ್ಲೆಯಲ್ಲಿನ ಇಬ್ಬರು ಸಚಿವರು ಯೋಜನೆಯ ವಿಚಾರದಲ್ಲಿ ಮೌನವಾಗಿದ್ದಾರೆ. ಯೋಜನೆಯನ್ನು ಕೈಬಿಟ್ಟು, ಕಾಮಗಾರಿ ನಿಲ್ಲಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದರು.

ಈ ಪ್ರತಿಭಟನೆ ರಾಜಕೀಯೇತರವಾಗಿದ್ದು, ಜಿಲ್ಲೆಯ ಹಿತ ಕಾಪಾಡಲು ಕಾಂಗ್ರೆಸ್ ಮುಖಂಡರಿಗೂ ಆಹ್ವಾನ ನೀಡಿದ್ದೇನೆ. ಗೊರೂರು ಜಲಾಶಯದಿಂದ ಜಿಲ್ಲೆಗೆ 24.5ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದರೂ ಸಮರ್ಪಕವಾಗಿ ನೀರು ಬಂದಿಲ್ಲ, ಆದರೆ, ಶಿವಕುಮಾರ್ ನಮ್ಮ ಜಿಲ್ಲೆಯ ಪಾಲನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.