Mantri Mall ಇಂದು ಓಪನ್: ಜುಲೈ 31ಕ್ಕೂ ಮುನ್ನ ತೆರಿಗೆ ಪಾವತಿಸುವಂತೆ ಹೈಕೋರ್ಟ್ ಆದೇಶ
ಮಲ್ಲೇಶ್ವರಂನ ಮಂತ್ರಿ ಸ್ಕ್ವೇರ್ ಅನ್ನು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಓಪನ್ ಮಾಡಲು ಅರ್ಜಿದಾರರಿಗೆ ಅವಕಾಶ ನೀಡುವಂತೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಿರ್ದೇಶಿಸಿದೆ.

ಬೆಂಗಳೂರು: ಮಲ್ಲೇಶ್ವರಂನ ಮಂತ್ರಿ ಸ್ಕ್ವೇರ್ ಅನ್ನು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಓಪನ್ ಮಾಡಲು ಅರ್ಜಿದಾರರಿಗೆ ಅವಕಾಶ ನೀಡುವಂತೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಿರ್ದೇಶಿಸಿದೆ.
ಮಾಲ್ ನಡೆಸುತ್ತಿರುವ ಅರ್ಜಿದಾರ M/s Abhishek Propbuild Pvt Ltd ಕಂಪನಿಗೆ ಜುಲೈ 31 ಅಥವಾ ಅದಕ್ಕೂ ಮೊದಲು ಬಿಬಿಎಂಪಿಗೆ 20 ಕೋಟಿ ರೂಪಾಯಿಗಳನ್ನು ಠೇವಣಿ ಮಾಡುವಂತೆ ನಿರ್ದೇಶಿಸಿದ ನಂತರ ಹೈಕೋರ್ಟ್ ಈ ಮಧ್ಯಂತರ ಆದೇಶ ನೀಡಿದೆ ಮತ್ತು ಠೇವಣಿಯಲ್ಲಿ 3.50 ಕೋಟಿ ತೆರಿಗೆಯನ್ನು ಜೂನ್ 1 ಅಥವಾ ಅದಕ್ಕಿಂತ ಮೊದಲು ಠೇವಣಿ ಮಾಡಬೇಕು ಎಂದು ಸೂಚಿಸಿದೆ.
ಮಾಲ್‌ಗೆ ಬೀಗ ಹಾಕಿರುವ ಬಿಬಿಎಂಪಿಯ ಕ್ರಮ ಪ್ರಶ್ನಿಸಿ ಮಾಲೀಕರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ನೇತೃತ್ವದ ರಜಾಕಾಲದ ಪೀಠ, ಈ ಮಧ್ಯಂತರ ಆದೇಶವನ್ನು ನೀಡಿದೆ.
2019 ರಿಂದ 41 ಕೋಟಿ ರೂಪಾಯಿಗಳ ಆಸ್ತಿ ತೆರಿಗೆ ಬಾಕಿಯನ್ನು ಪಾವತಿಸದ ಕಾರಣ ಮಂತ್ರಿ ಮಾಲ್ ಗೆ ಬಿಬಿಎಂಪಿ ಬೀಗ ಹಾಕಿತ್ತು. ಹೀಗಾಗಿ ಕಂಪನಿಯು ಹೈಕೋರ್ಟ್ ಮೆಟ್ಟಿಲೇರಿತ್ತು.
ಅರ್ಜಿದಾರ ಕಂಪನಿಯ ಹಣಕಾಸು ಅಕಾರಿ ಅಫಿಡವಿಟ್ ಸಲ್ಲಿಸಿ, 2024ರ ಜುಲೈ 31ರೊಳಗೆ 20 ಕೋಟಿ ರೂ.ಗಳನ್ನು ಬಿಬಿಎಂಪಿಗೆ ಪಾವತಿಸುವುದಾಗಿ ನ್ಯಾಯಪೀಠಕ್ಕೆ ಮುಚ್ಚಳಿಕೆ ನೀಡಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘‘ಅರ್ಜಿದಾರ ಕಂಪನಿಯು 2024ರ ಜೂ.1ರೊಳಗೆ 3.5 ಕೋಟಿ ರೂ. ಆಸ್ತಿ ತೆರಿಗೆಯನ್ನು ಬಿಬಿಎಂಪಿಗೆ ಪಾವತಿಸಬೇಕು. ಶುಕ್ರವಾರ (ಮೇ 17) ಬೆಳಗ್ಗೆ 10 ಗಂಟೆಯಿಂದ ಮಾಲ್‌ಗೆ ಹಾಕಿರುವ ಬೀಗವನ್ನು ಬಿಬಿಎಂಪಿ ತೆಗೆಯಬೇಕು’’ ಎಂದು ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



