ನೆಲಮಂಗಲ ಬಳಿ KSRTC ಬಸ್ ಭೀಕರ ಅಪಘಾತ: ನುಜ್ಜುಗುಜ್ಜಾದ ಬಸ್, 6 ಮಂದಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್'ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್'ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯಲ್ಲಿ ಘಟನೆ ನಡೆದಿದ್ದು, 4 ಅಡಿ ಎತ್ತರದ ರಸ್ತೆ ವಿಭಜಕವನ್ನು ದಾಟಿ ಎದುರು ರಸ್ತೆಯ ಡಿವೈಡರ್ ಮೇಲೆ ಬಸ್ ಬಂದು ನಿಂತಿದೆ.
ಬೆಂಗಳೂರು–ಸೋಮವಾರಪೇಟೆ ಬಸ್ ಅಪಘಾತಕ್ಕೀಡಾಗಿದ್ದು ಮುಂಭಾಗದಲ್ಲಿ ಕುಳಿತಿದ್ದವರಿಗೆ ಗಾಯಗಳಾಗಿದೆ ಎಂದು ವರದಿಗಳು ತಿಳಿಸಿವೆ.
ಬಸ್ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ರಭಸಕ್ಕೆ ಸದ್ಯ ಸೇತುವೆಯಿಂದ ಕೆಳಕ್ಕೆ ಬೀಳುವುದಕ್ಕೆ ಅವಕಾಶವಿಲ್ಲದಂತೆ ಮುಂದಿನ ಡಿವೈಡರ್‌ಗೆ ಜಂಪ್ ಮಾಡಿರುವುದು ಭಯನಕವಾಗಿದೆ. ಅಲ್ಲದೆ, ಒಂದು ವೇಳೆ ಬಸ್ ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದಿದ್ದರೆ ದೊಡ್ಡ ದುರಂತವೇ ಸಂಭವಿಸುವ ಸಾಧ್ಯತೆಗಳಿರುತ್ತಿತ್ತು.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಡಿವೈಡರ್‌ಗೆ ಬಸ್ ಡಿಕ್ಕಿ ಹೊಡೆದು ನಿಂತಿದ್ದರಿಂದ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನೆ ಬಳಿಕ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ಕ್ರೇನ್ ಸಹಾಯದಿಂದ ಬಸ್ ತೆರವುಗೊಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



