ರಾಜ್ಯ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
ಕೃಷಿ ಸಚಿವ ಚಲುವರಾಯಸ್ವಾಮಿ
Published On :

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಚಿವ ಎನ್‌ ಚಲುವರಾಯಸ್ವಾಮಿ ಪಾತ್ರ ಕೂಡ ಇದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಆರೋಪಕ್ಕೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ. ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಈ ರೀತಿ ಆರೋಪ ಮಾಡಿದ್ದಾನೆ ಎಂದಿದ್ದಾರೆ.

ಬೇರೆಯವರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲು ನನ್ನ ಹಾಗೂ ನನ್ನ ಸಹೋದ್ಯೋಗಿ ಮಿತ್ರರಾದ ಡಿಕೆ ಶಿವಕುಮಾರ್‌, ಕೃಷ್ಣ ಭೈರೇಗೌಡ ಹಾಗೂ ಪ್ರಿಯಾಂಕ್‌ ಖರ್ಗೆ ಅವರ ಮೇಲೆ ಕೂಡ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ. ದೇವರಾಜೇಗೌಡ ಅವರ ಮಾತುಗಳಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಈಗಾಗಲೇ ನಾನು ದೇವರಾಜೇಗೌಡ ಅವರ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ದಾಖಲಿಸಲು ನಿರ್ಧರಿಸಿರುವೆ. ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಸತ್ಯಾಂಶ ಆದಷ್ಟು ಬೇಗ ಹೊರ ಬರಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.