ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿಲ್ಲ; ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ: ಜಿ ಪರಮೇಶ್ವರ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ)ಯ ನಾಲ್ಕು ತಿಂಗಳ ಹಳೆಯ ವರದಿಯನ್ನು ಆಧರಿಸಿ ಪರಿಸ್ಥಿತಿಯನ್ನು ಅಂದಾಜಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ.

ತುಮಕೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ)ಯ ನಾಲ್ಕು ತಿಂಗಳ ಹಳೆಯ ವರದಿಯನ್ನು ಆಧರಿಸಿ ಪರಿಸ್ಥಿತಿಯನ್ನು ಅಂದಾಜಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ.
ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣ ಹೆಚ್ಚಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎನ್‌ಸಿಆರ್‌ಬಿ ಬಿಡುಗಡೆ ಮಾಡಿರುವ ವರದಿ ನನ್ನ ಗಮನಕ್ಕೆ ಬಂದಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಆದರೆ, ಘಟನೆಗಳ ಕಾರಣಗಳು ಒಂದರಿಂದ ಇನ್ನೊಂದಕ್ಕೆ ಭಿನ್ನವಾಗಿರುವುದರಿಂದ ನಾಲ್ಕು ತಿಂಗಳ ವರದಿಯನ್ನು ಆಧರಿಸಿ ವಿಶ್ಲೇಷಣೆ ಮಾಡಲು ಸಾಧ್ಯವಾಗುವುದಿಲ್ಲ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಮತ್ತು ನಾವು ಬಿಜೆಪಿಯಿಂದ ಪಾಠ ಕಲಿಯಬೇಕಾಗಿಲ್ಲ. ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಎಷ್ಟೇ ಪ್ರಯತ್ನಿಸಿದರೂ ಜನರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ನಾವು ಸಿದ್ಧರಿದ್ದೇವೆ ಎಂದರು.
ಬಿಜೆಪಿಯವರ ಆಡಳಿತದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿಅಂಶಗಳನ್ನು ಬಿಡುಗಡೆ ಶೀಘ್ರದಲ್ಲೇ ಮಾಡಲಾಗುವುದು. ಆಗ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು ನಡೆದಿದ್ದವು ಎಂಬುದು ಜನರಿಗೆ ಗೊತ್ತಾಗುತ್ತದೆ ಎಂದು ತಿಳಿಸಿದರು.
ದೇವರಾಜೇಗೌಡ ಅವರಿಗೆ 100 ಕೋಟಿ ರೂ. ಆಮಿಷ ಒಡ್ಡಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ನೋಡಿಕೊಳ್ಳುತ್ತಾರೆ. ‘ನಾನು ಹೊರಗೆ ಬಂದರೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ’ ಎಂಬ ದೇವರಾಜೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಹಾಗಾದರೆ ಅವರು ಜೈಲಿನಲ್ಲೇ ಇರಬೇಕಾಗುತ್ತದೆ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



