ಐಪಿಎಲ್ ಬೆಟ್ಟಿಂಗ್: ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕ ನೇಣಿಗೆ ಶರಣು!
ಐಪಿಎಲ್ ಬೆಟ್ಟಿಂಗ್‌ದಂಧೆಯಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ.

ರಾಯಚೂರು: ಐಪಿಎಲ್ ಬೆಟ್ಟಿಂಗ್‌ದಂಧೆಯಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ.
ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ (29) ಆತ್ಮಹತ್ಯೆಗೆ ಶರಣಾದ ಯುವಕ. ಈತ ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದ. ಆದರೆ ಬೆಟ್ಟಿಂಗ್ ಕಟ್ಟಿದ ಎಲ್ಲ ಮ್ಯಾಚ್‌ಗಳು ಸೋತಿದ್ದವು. ಸಾಲದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಸಾಲಗಾರರ ಕಾಟಕ್ಕೆ ಬೇಸತ್ತ ಮುದಿಬಸವ ಲಾಡ್ಜ್ ರೂಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೂಮಿನ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಲಾಡ್ಜ್ ಸಿಬ್ಬಂದಿ ಒಳಹೊಕ್ಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಸಿಂಧನೂರು ನಗರ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



