ಪೊಲೀಸರಿಗೆ ಬೆದರಿಕೆ ಆರೋಪ: ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು
ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಕಲ್ಲು ಕ್ವಾರಿ ಹಾಗೂ ಸ್ಪೋಟ ಚಟುವಟಿಕೆ ಕೇಸ್ ನಲ್ಲಿ ರೌಡಿ ಶೀಟರ್ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ ವೇಳೆ ಠಾಣೆಗೆ ಬಂದ ಶಾಸಕರು, ತಮ್ಮ ಪಕ್ಷದ ಕಾರ್ಯಕರ್ತನಾದ ಶಶಿರಾಜ್ ಶೆಟ್ಟಿಯನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಅವಾಚ್ಯವಾಗಿ ಬೈದು ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಕಲಂ 353,504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಕಳಂಜೆದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ ವೇಳೆ ಅದನ್ನು ತಡೆದ ಘಟನೆ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



