ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ: ಪೊಲೀಸರಿಂದ ಭದ್ರತೆ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆಸಲಾಗಿದೆ.

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆಸಲಾಗಿದೆ.
ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳಿಂದ ಮೊಟ್ಟೆ ಎಸೆತ ನಡೆದಿದೆ ಎಂದು ವರದಿಗಳು ತಿಳಿಸಿವೆ ಕಾರಿನಲ್ಲಿ ಬಂದ ಐದಾರು ಮಂದಿ, ಮನೆಯ ಮುಂದಿದ್ದ ಪೊಲೀಸರನ್ನು ಕಂಡು ಪೊಲೀಸರ ಕಣ್ತಪ್ಪಿಸಿ ಐದಾರು ಮೊಟ್ಟೆ ಎಸೆದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.
ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆತದ ಬಳಿಕ ಎಲ್ಆರ್‌ಎಸ್ ಮನೆ ರಸ್ತೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.
ಪೆನ್ ಡ್ರೈವ್ ಪ್ರಕರಣ ವಿಚಾರದಲ್ಲಿ ವಕೀಲ ದೇವರಾಜೇಗೌಡ ಜೊತೆ ಮಾತನಾಡುವಾಗ ಜೆಡಿಎಸ್ ವರಿಷ್ಠ ದೇವೇಗೌಡ ಅವರ ಬಗ್ಗೆ ಶಿವರಾಮೇಗೌಡ ಅವರು ಅವಹೇಳನಕಾರಿ ಮಾತನಾಡಿದ್ದರು ಎಂದು ವರದಿಯಾಗಿದೆ. ಈ ಕುರಿತ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



