ರಾಜ್ಯ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ Siddaramaiah ಸ್ಪಷ್ಟನೆ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ Siddaramaiah ಸ್ಪಷ್ಟನೆ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್ ಆಯೋಜಿಸಿದ್ದ ‘ಮೀಟ್ ದಿ ಪ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಲೋಕಸಭೆ ಚುನಾವಣೆ ನಂತರ ಯಾವುದೇ ಸಚಿವ ಸಂಪುಟ ಪುನಾರಚನೆ ಸುದ್ದಿಗಳಲ್ಲಿ ಹುರುಳಿಲ್ಲ. ಆ ಬಗ್ಗೆ ನಾವಿನ್ನೂ ಯೋಚಿಸಿಲ್ಲ ಎಂದರು.

ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಕಾಂಗ್ರೆಸ್ ಸರ್ಕಾರ ಇರವಷ್ಟೂ ದಿನ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ ಎಂದರು.

ಅಂತೆಯೇ ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.