ಬೆಳಗಾವಿ: ಸಾಲ ತೀರಿಸದ್ದಕ್ಕೆ ಪತ್ನಿ-ಪುತ್ರನ ಗೃಹಬಂಧನ; ಮನನೊಂದ ರೈತ ಆತ್ಮಹತ್ಯೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು

ಬೆಳಗಾವಿ: ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು.
ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜು ಖೋತಗಿ ಎಂಬ ರೈತ ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ನೀಡುತ್ತಿದ್ದರು.
ಎರಡು ದಿನಗಳ ಹಿಂದೆ ಸಿದ್ದವ್ವ ಏಕಾಏಕಿ ರಾಜು ಅವರನ್ನು ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ತಾಕೀತು ಮಾಡಿದ್ದಾರೆ. ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದಕ್ಕೆ ಆಗುವುದಿಲ್ಲ, ಸಾಲ ವಾಪಾಸ್ ಕೊಡುವವರೆಗೂ ಪುತ್ರನನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ಹೇಳಿದ್ದಾರೆ.
ಈ ವೇಳೆ ಪುತ್ರ ಬಸವರಾಜ್ನನ್ನು ತಂದೆ ರಾಜು ಸಿದ್ದವ್ವ ಮನೆಯಲ್ಲಿ ಬಿಟ್ಟು ಬಂದಿದ್ದರು. ಮಾರನೇ ದಿನ ಕರೆಯಲು ಹೋದ ದುರ್ಗವ್ವಗೂ ಗೃಹ ಬಂಧನದಲ್ಲಿಡಲಾಗಿತ್ತು. ಇದರಿಂದ ಮನನೊಂದು ರೈತ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ದೂರು ನೀಡಲು ಹೋದರೆ, ಸಿದ್ದವ್ವಳ ಅನ್ಯಾಯದ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳದೇ ಸತಾಯಿಸಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದುರ್ಬಲ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ ವಿರುದ್ಧ ಪತಿ ಕಳೆದುಕೊಂಡ ದುರ್ಗವ್ವ, ಪೋಷಕರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



