ರಾಜ್ಯ

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ: ಐತಿಹಾಸಿಕ ಹೆಜ್ಜೆ ಎಂದ ಸಿಎಂ ಸಿದ್ದರಾಮಯ್ಯ

ಹೊರಗುತ್ತಿಗೆ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಗೆ ಅವಕಾಶ ಕಲ್ಪಿಸುವ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ.

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ: ಐತಿಹಾಸಿಕ ಹೆಜ್ಜೆ ಎಂದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಿದ್ದು, ಡಾಟಾ ಎಂಟ್ರಿ ಆಪರೇಟರ್‌, ವಾಹನ ಚಾಲಕರು, ಗ್ರೂಪ್‌ -ಡಿ ಹಾಗೂ ಸ್ವಚ್ಛತಾ ಸಿಬ್ಬಂದಿ ಒಳಗೊಂಡು ಎಲ್ಲ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ನು ಮುಂದೆ ಮೀಸಲು ನಿಯಮ ಪಾಲನೆ ಕಡ್ಡಾಯವಾಗಿದೆ.

ಕಳೆದ ವರ್ಷ ಡಿ.21 ರಂದು ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33 ಮೀಸಲು ಕಡ್ಡಾಯವಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದೂಳಿದ ವರ್ಗಗಳಿಗೆ ಎಲ್ಲಇಲಾಖೆಗಳು, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ.

ಇನ್ನು ಈ ಬಗ್ಗೆ ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹೊರಗುತ್ತಿಗೆ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಗೆ ಅವಕಾಶ ಕಲ್ಪಿಸುವ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಪತ್ತು, ಅಧಿಕಾರ, ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕೆಂಬ ಸಮಸಮಾಜದ ಆಶಯವೇ ನಮ್ಮ ಸರ್ಕಾರದ ಆಶಯವಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.