ರಾಜ್ಯ

ಮಂಗಳೂರಿನಲ್ಲಿ ಪಿಸ್ತೂಲ್ ಹಿಡಿದು ಆತಂಕ ಸೃಷ್ಟಿ: ಕೇರಳ ಮೂಲದ ಇಬ್ಬರ ಬಂಧನ

ಅಕ್ರಮವಾಗಿ ಬಂದೂಕು ಮತ್ತು ಸಜೀವ ಮದ್ದುಗುಂಡುಗಳನ್ನು ಹೊಂದಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಪಿಸ್ತೂಲ್ ಹಿಡಿದು ಆತಂಕ ಸೃಷ್ಟಿ: ಕೇರಳ ಮೂಲದ ಇಬ್ಬರ ಬಂಧನ
ಆರೋಪಿಗಳ ಬಂಧನ — PTI
Published On :

ಮಂಗಳೂರು: ಅಕ್ರಮವಾಗಿ ಬಂದೂಕು ಮತ್ತು ಸಜೀವ ಮದ್ದುಗುಂಡುಗಳನ್ನು ಹೊಂದಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿಗಳಾದ ಮೊಹಮ್ಮದ್ ಅಸ್ಗರ್ (26) ಮತ್ತು ಅಬ್ದುಲ್ ನಿಸಾರ್ ಕೆ (29) ಎಂದು ಗುರುತಿಸಲಾಗಿದೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಇಬ್ಬರು ವ್ಯಕ್ತಿಗಳು ಯಾವುದೇ ಪರವಾನಗಿ ಇಲ್ಲದ ಕಪ್ಪು ಕಾರಿನಲ್ಲಿ ಪಿಸ್ತೂಲ್ ಹಿಡಿದುಕೊಂಡು ಆತಂಕ ಸೃಷ್ಟಿ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ದಾಳಿ ನಡೆಸಿದ ಸಿಸಿಬಿ ತಂಡವು ಒಂದು ಪಿಸ್ತೂಲ್, ಎರಡು ಜೀವಂತ ಗುಂಡುಗಳು, ಎರಡು ಮೊಬೈಲ್ ಫೋನ್ಗಳು ಮತ್ತು ಕಪ್ಪು ಹುಂಡೈ ವೆರ್ನಾವನ್ನು ಜಪ್ತಿ ಮಾಡಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಒಟ್ಟು 7,15,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಹಮ್ಮದ್ ಅಸ್ಗರ್ ಕ್ರಿಮಿನಲ್ ಹಿನ್ನಲೆ ಹೊಂದಿದ್ದು ಆತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಸೇರಿದಂತೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಕಳ್ಳಸಾಗಣೆ ಸಂಬಂಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.