Horse Race ನಡೆಸಲು High court ಅನುಮತಿ ಕೋರಿದ ಬೆಂಗಳೂರು ಟರ್ಫ್ ಕ್ಲಬ್: ನಿಲುವು ತಿಳಿಸಲು ಸರ್ಕಾರಕ್ಕೆ ಸೂಚನೆ
ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ಬಿಟಿಸಿ) ಮೇ 25 ಮತ್ತು 26ರಂದು ರೇಸ್ ಚಟುವಟಿಕೆ ನಡೆಸಲು ಷರತ್ತುಬದ್ಧ ಅನುಮತಿ ನೀಡುವ ಸಂಬಂಧ ನಿಮ್ಮ ನಿಲುವು ಏನು ಎಂಬುದನ್ನು ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ಬಿಟಿಸಿ) ಮೇ 25 ಮತ್ತು 26ರಂದು ರೇಸ್ ಚಟುವಟಿಕೆ ನಡೆಸಲು ಷರತ್ತುಬದ್ಧ ಅನುಮತಿ ನೀಡುವ ಸಂಬಂಧ ನಿಮ್ಮ ನಿಲುವು ಏನು ಎಂಬುದನ್ನು ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ಪರವಾನಗಿ ನವೀಕರಿಸಲು ಕೋರಲಾಗಿರುವ ಮನವಿಯನ್ನು ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಬೆಂಗಳೂರು ಟರ್ಫ್ ಕ್ಲಬ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮೇ 25 ಮತ್ತು 26ರಂದು ರೇಸ್ ಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಬಹಳಷ್ಟು ಜನರ ಜೀವನೋಪಾಯ ರೇಸಿಂಗ್ ಚಟುವಟಿಕೆಯನ್ನು ಅವಲಂಬಿಸಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಹಾಗಾಗಿ ರೇಸಿಂಗ್ ಚಟುವಟಿಕೆಗೆ ಷರತ್ತುಬದ್ಧ ಅನುಮತಿ ನೀಡುವ ನಿಟ್ಟಿನಲ್ಲಿ ಸರ್ಕಾರ ಕೆಲವು ಪ್ರಸ್ತಾವನೆ ಹಾಗೂ ಸೂಚನೆಗಳ ಸಹಿತ ಗುರುವಾರ (ಮೇ 23) ನ್ಯಾಯಾಲಯಕ್ಕೆ ಉತ್ತರಿಸಬೇಕು. ಯಾವ್ಯಾವ ಷರತ್ತುಗಳನ್ನು ವಿಧಿಸಬೇಕು ಎಂಬುದನ್ನು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬಹುದು.
ನಂತರ ಪರವಾನಗಿ ನವೀಕರಣಕ್ಕೆ ಕೋರಿರುವ ಅರ್ಜಿಯನ್ನು ಪರಿಗಣಿಸುವ ಅಥವಾ ಪರಿಗಣಿಸದೇ ಇರುವ ಬಗ್ಗೆ ತೀರ್ಮಾನಿಸಬಹುದು’ ಎಂದು ನ್ಯಾಯಪೀಠ ಹೇಳಿದೆ. ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಲಾಗಿದೆ.
ಈ ವರ್ಷ ಏಪ್ರಿಲ್‌ನಿಂದ ಸರ್ಕಾರ ಪರವಾನಗಿ ನೀಡಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ. ಮೇ, ಜೂನ್ ಮತ್ತು ಜುಲೈನಲ್ಲಿ ಬಿಟಿಸಿಯಲ್ಲಿ ಮಾತ್ರ ರೇಸ್‌ಗಳು ನಿಗದಿಯಾಗಿರುವುದರಿಂದ ಅವರ ಎಲ್ಲಾ ಕುದುರೆಗಳು ನಗರದಲ್ಲಿವೆ, ಪರವಾನಗಿ ನೀಡದಿದ್ದರೇ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತಿದೆ ಎಂದು ರೇಸ್ ಕುದುರೆ ಮಾಲೀಕರು ಹೇಳಿದ್ದಾರೆ.
ತೆರಿಗೆ ವಂಚನೆ ಮತ್ತು ಅಕ್ರಮವಾಗಿ ಬೆಟ್ಟಿಂಗ್ ಹಣವನ್ನು ಸಂಗ್ರಹಿಸಿದ್ದಕ್ಕಾಗಿ ಬುಕ್ಕಿಗಳ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ತನಿಖೆಯ ವಿವರವನ್ನು ಪರಿಶೀಲಿಸಬೇಕಾಗಿರುವುದರಿಂದ ಪರವಾನಗಿ ನೀಡಬಹುದೇ ಎಂದು ಪರಿಗಣಿಸಲು ಸರ್ಕಾರಕ್ಕೆ ನಾಲ್ಕರಿಂದ ಆರು ವಾರಗಳ ಅಗತ್ಯವಿದೆ ಎಂದು ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



