ರಾಜ್ಯ

ಬೇರೆ ಜಾತಿ ಸ್ನೇಹಿತೆಯ ಮದುವೆ ಆಗಬೇಕು ಅಂದುಕೊಂಡಿದ್ದೆ: ಕಾಲೇಜು ದಿನಗಳ Love Story ರಿವೀಲ್ ಮಾಡಿದ ಸಿಎಂ ಸಿದ್ದರಾಮಯ್ಯ

ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಕಾಲೇಜು ದಿನಗಳ ಲವ್ ಸ್ಟೋರಿ ಹೇಳಿದ್ದಾರೆ.

ಬೇರೆ ಜಾತಿ ಸ್ನೇಹಿತೆಯ ಮದುವೆ ಆಗಬೇಕು ಅಂದುಕೊಂಡಿದ್ದೆ: ಕಾಲೇಜು ದಿನಗಳ Love Story ರಿವೀಲ್ ಮಾಡಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಮೈಸೂರು: ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಕಾಲೇಜು ದಿನಗಳ ಲವ್ ಸ್ಟೋರಿ ಹೇಳಿದ್ದಾರೆ.

ಗುರುವಾರ ಮೈಸೂರಿನಲ್ಲಿ ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದರು.

''ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಇದಕ್ಕಾಗಿ ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.