ನಡು ರಸ್ತೆಯಲ್ಲಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಬಿಜೆಪಿ ಕಿಡಿ
ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿರುವ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಉಡುಪಿ: ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿರುವ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ಬಣದ ಯುವಕರು ಉಡುಪಿ- ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರುಗಳನ್ನು ಗುದ್ದಿಸಿ ಹೊಡೆದಾಟ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಜೂನ್ 1ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಗ್ಯಾಂಗ್ ವಾರ್ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ.
ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿದ್ದರಾಮಯ್ಯ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್ ಎಂದು ಕಿಡಿಕಾರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



