ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾಗೆ ಸಿಸಿಬಿ ನೋಟಿಸ್, ಮೇ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ತಾವು ಹೈದರಾಬಾದ್‍ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು.
ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.
ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿತ್ತು. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಹೇಳಿದ್ದರು.
ಈ ನಜುವೆ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು.
73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



