ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಿಎಂ, ಡಿಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಸಾಂಪ್ರದಾಯಿಕ ಉಡುಗೆಗಳಾದ ಶೆಲ್ಲೆ ಮತ್ತು ಪಂಚೆಯನ್ನು ಧರಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಬೆಂಗಳೂರಿನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಮತ್ತು ಡಿಸಿಎಂ, ಅಲ್ಲಿಂದ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದರು. ದೇವರ ದರ್ಶನ ಪಡೆದ ನಂತರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ‘ರಾಜ್ಯದಲ್ಲಿ ಉತ್ತಮ ಮಳೆ - ಬೆಳೆ ಆಗಲೆಂದು ಪ್ರಾರ್ಥನೆ ಮಾಡಿದ್ದೇವೆ. ನಮ್ಮ ಧರ್ಮದ ಸಂಪ್ರದಾಯದಂತೆ ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ನಮಸ್ಕಾರ ಹೇಳಲು ಬಂದಿದ್ದೇವೆ. ರಾಜ್ಯದ ಜನತೆ ಪರವಾಗಿ ಹಾಗೂ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಿದ್ದೇನೆ ಎಂದರು.
ರಾಜ್ಯದ ನಾನಾ ಕಡೆಗಳಿಂದ ಶಕ್ತಿ ಯೋಜನೆ ಪ್ರಯೋಜನ ಪಡೆದು ಧರ್ಮಸ್ಥಳಕ್ಕೆ ಭಕ್ತರು ಬರುತ್ತಿದ್ದಾರೆಂದು ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ. ದೇವಸ್ಥಾನದೊಳಗೆ ಇದ್ದ ಮಹಿಳಾ ಭಕ್ತರು ತಮಗೆ ಎರಡು ಸಾವಿರ ಸಿಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅವರೆಲ್ಲರ ಆಶೀರ್ವಾದ ನಮಗೆ ಶಕ್ತಿ ತುಂಬಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



