ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ, 11 ಪೊಲೀಸರಿಗೆ ಗಾಯ
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಸಾವಿಗೀಡಾಗಿದ್ದು, ಇದರಿಂದ ರೊಚ್ಚಿಗೆದ್ದ ಆರೋಪಿ ಸಂಬಂಧಿಕರು ಠಾಣೆ ಮೇಲೆ ದಾಳಿ ಮಾಡಿ, ಧ್ವಂಸಗೊಳಿಸಿದ್ದಾರೆ. ಘಟನೆಯಲ್ಲಿ 11 ಮಂದಿ ಪೊಲೀಸರಿಗೆ ಗಾಯಗಳಾಗಿದ್ದು, ಹಲವು ವಾಹನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಸಾವಿಗೀಡಾಗಿದ್ದು, ಇದರಿಂದ ರೊಚ್ಚಿಗೆದ್ದ ಆರೋಪಿ ಸಂಬಂಧಿಕರು ಠಾಣೆ ಮೇಲೆ ದಾಳಿ ಮಾಡಿ, ಧ್ವಂಸಗೊಳಿಸಿದ್ದಾರೆ. ಘಟನೆಯಲ್ಲಿ 11 ಮಂದಿ ಪೊಲೀಸರಿಗೆ ಗಾಯಗಳಾಗಿದ್ದು, ಹಲವು ವಾಹನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.
ಒಸಿ(ಮಟ್ಕಾ) ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ.
ಆದರೆ, ಇದೀಗ ಅದಿಲ್ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಅದಿಲ್ ಸಂಬಂಧಿಕರು ಹಾಗೂ ಸ್ನೇಹಿತರು, ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ನೂರಾರು ಜನ ಜಮಾಯಿಸಿ, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ನಡುವೆ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಅವರು ಮೃತ ಆದಿಲ್ ಸಂಬಂಧಿಕರನ್ನು ಮನವೊಲಿಸಲು ಯತ್ನಿಸಿದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ. ಸದ್ಯ ಠಾಣೆ ಎದುರು ಬಿಗುವಿವ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಕೂಡ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾತನಾಡಿ, ಮೃತ ಆದಿಲ್ನನ್ನು ಶುಕ್ರವಾರ ಪೊಲೀಸರು ಠಾಣೆಗೆ ಕರೆತಂದರು. ಬಳಿಕ ಆದಿಲ್ ಠಾಣೆಯಲ್ಲಿ ಕುಸಿದು ಬೀಳುತ್ತಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಆದಿಲ್ ಪೊಲೀಸ್ ಠಾಣೆಯಲ್ಲಿ 6-7 ನಿಮಿಷ ಕೂಡ ಇಲ್ಲ. ಆದರೂ ಕೂಡ ಮೃತನ ಸಂಬಂಧಿಕರು ಲಾಕಪ್‌ಡೆತ್ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಸಿಸಿಕ್ಯಾಮೆರಾ ಇದೆ. ಎಲ್ಲ ಪರಿಶೀಲನೆ ಮಾಡಲಾಗುತ್ತಿದೆ. ಪ್ರಮಾಣಿಕ ತನಿಖೆ ಮಾಡುತ್ತೇವೆಂದು ಹೇಳಿದರು.
ಮೃತರ ತಂದೆ ದೂರು ಕೊಟ್ಟಿದ್ದಾರೆ. ತನಿಖೆ ಆಗುತ್ತದೆ. ಈಗಾಗಲೇ ಶವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಂಭೀರ ಪ್ರಕರಣ ಆದ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ತನಿಖೆ ಮಾಡಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಾಗಿವೆ. ಕಲ್ಲು ತೂರಾಟದಲ್ಲಿ 7 ಪೊಲೀಸ್ ವಾಹನ ಹಾಗೂ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



