ರಾಜ್ಯ

ಖಾಸಗಿ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ ಬಳಕೆ: 7 ವಿಶೇಷ ತಂಡ ರಚನೆ, ಜೂನ್ 1ರಿಂದ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಮುಂದು!

ನಗರದಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಖಾಸಗಿ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ ಬಳಕೆ: 7 ವಿಶೇಷ ತಂಡ ರಚನೆ,  ಜೂನ್ 1ರಿಂದ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಮುಂದು!
ಸಂಗ್ರಹ ಚಿತ್ರ
Published On :

ಬೆಂಗಳೂರು: ನಗರದಲ್ಲಿ ಸರ್ಕಾರದ ಅಧೀನದ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಸರ್ಕಾರದ ಲಾಂಛನ, ಚಿಹ್ನೆಗಳನ್ನು ಅಳವಡಿಸಿರುವುದು ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಈಗಾಗಲೇ ಸಾರಿಗೆ ಇಲಾಖೆಯಲ್ಲಿ ಈ ಬಗ್ಗೆ ನೂರಾರು ಪ್ರಕರಣಗಳು ದಾಖಲಾಗಿದ್ದು, ಇಂತಹ ನೋಂದಣಿ ಫಲಕಗಳನ್ನು ತೆರವುಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಏಳು ವಿಶೇಷ ತಂಡಗಳನ್ನು ರಚಿಸಿ, ಜೂನ್ ಒಂದರಿಂದ ಕಾರ್ಯಾಚರಣೆ ಆರಂಭಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಮೊದಲಿಗೆ 500, ಎರಡನೇ ಬಾರಿ ಒಂದು ಸಾವಿರ ರೂಪಾಯಿ ಅದಾದ ನಂತರ ವಾಹನವನ್ನು ಸೀಜ್ ಮಾಡಲು ಇಲಾಖೆ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಸಾರಿಗೆ ಇಲಾಖೆಯ ನಿಯಮದಂತೆ, ಕೇವಲ ಸರ್ಕಾರಿ ವಾಹನಗಳಿಗೆ ಅಂದರೇ ಜಿ ಸಿರೀಸ್ ಇರೋ ನಂಬರ್ ಪ್ಲೇಟ್ ಇರುವ ವಾಹನಗಳಲ್ಲಿ ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ ಇರಬೇಕು. ಅದನ್ನು ಹೊರತುಪಡಿಸಿ, ಸರ್ಕಾರದ ಅಧೀನದಲ್ಲಿ ಬರುವ ಸರ್ಕಾರಿ ನಿಗಮ, ಮಂಡಳಿ, ಸಂಸ್ಥೆ, ಲೋಕಲ್ ಬಾಡಿ, ಮುನ್ಸಿಪಲ್ ವಾಹನಗಳಲ್ಲಿಯೂ ಸರ್ಕಾರದ ಲಾಂಛನ ಬಳಕೆಗೆ ಅವಕಾಶವಿಲ್ಲ‌.

ಉದಾಹರಣೆಗೆ ಕೆಎಸ್​ಆರ್​ಟಿಸಿ ನಿಗಮವಾದರೂ ಅಧಿಕಾರಿಗಳು ಸರ್ಕಾರದ ಚಿಹ್ನೆ, ಹೆಸರು ಬಳಸುವಂತಿಲ್ಲ. ಅನಧಿಕೃತವಾದ ಲಾಂಛನ ಅಥವಾ ಚಿಹ್ನೆ ಹೊಂದಿರುವ ವಾಹನಗಳ ವಿರುದ್ಧ ಮೋಟಾರು ವಾಹನಗಳ ಕಾಯ್ದೆಯಡಿ ಕ್ರಮ ಕೈಗೊಂಡು, ಕೇಸ್ ದಾಖಲಿಸಲಿಸುವ ಎಚ್ಚರಿಕೆ ರವಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.