ಚನ್ನಗಿರಿ ಲಾಕಪ್ ಡೆತ್: ಪೊಲೀಸ್ ಠಾಣೆ ಧ್ವಂಸ ಪ್ರಕರಣದ ತನಿಖೆ ಸಿಐಡಿಗೆ!
ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ.

ದಾವಣಗೆರೆ: ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ.
ಮಟ್ಕಾ ನಡೆಸುತ್ತಿದ್ದ ಆರೋಪದಲ್ಲಿ ಚನ್ನಗಿರಿ ಪೊಲೀಸರು ಅದಿಲ್ ಎಂಬಾತನನ್ನ ವಶಕ್ಕೆ ಪಡೆದಿದ್ದರು. ಠಾಣೆಯಲ್ಲಿ ಅದಿಲ್ ಕುಸಿದು ಬಿದ್ದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ಉದ್ವಿಗ್ನಗೊಂಡ ಮೃತನ ಸಂಬಂಧಿಕರು ಮತ್ತು ನೂರಾರು ಜನ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದು ಅಲ್ಲೆ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಈ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿ ಹೆಗಲಿಗೆ ನೀಡಲಾಗಿದ್ದು ಶೀಘ್ರವೇ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿದ್ದು, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ ಎಂದರು.
ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಉದ್ರಿಕ್ತರು ಧ್ವಂಸ ಮಾಡಿದ್ದಾರೆ. ನಂತರ ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ಜಮಾಯಿಸಿದ್ದ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದ ಕಲ್ಲು ತೂರಾಟದಲ್ಲಿ 7 ಪೊಲೀಸ್ ವಾಹನ ಹಾಗೂ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



