ರಾಮನಗರ: ಸರ್ಕಾರಿ ಬಸ್- ಬೈಕ್ ನಡುವೆ ಅಪಘಾತ- ಸ್ಥಳದಲ್ಲೇ ಇಬ್ಬರು ದುರ್ಮರಣ
ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ.

ರಾಮನಗರ : ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಓರ್ವ ಮಹಿಳೆ ಹಾಗೂ ಬೈಕ್ ಚಾಲಕ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಗಡಿ ತಾಲ್ಲೂಕಿನ ಹೊನ್ನಾಪುರ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.
ಕನಕಪುರದಿಂದ ರಾಮನಗರ ಕಡೆ ತೆರಳುತ್ತಿದ್ದ ಬೈಕ್ಗೆ ರಾಮನಗರದಿಂದ ಕನಪುರಕ್ಕೆ ತೆರಳುತ್ತಿದ್ದ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಲ್ಲಿ ಬಸ್ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



