ಬಕ್ರೀದ್: ತ್ಯಾಜ್ಯ ನಿರ್ವಹಣೆಗೆ ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರ ಆಗ್ರಹ
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ, ಜಲ ಹಾಗೂ ವಾಯು ಮಾಲಿನ್ಯ ತಗ್ಗಿಸಲು ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರು ಒತ್ತಾಯಿಸಿದ್ದಾರೆ.

ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ, ಜಲ ಹಾಗೂ ವಾಯು ಮಾಲಿನ್ಯ ತಗ್ಗಿಸಲು ತಾತ್ಕಾಲಿಕ ಕಸಾಯಿಖಾನೆ ನಿರ್ಮಿಸುವಂತೆ ಸರ್ಕಾರಕ್ಕೆ ತಜ್ಞರು ಒತ್ತಾಯಿಸಿದ್ದಾರೆ.
UVCE ಜಲ ಸಂಸ್ಥೆಯ ನಿರ್ದೇಶಕರಾದ ಇನಾಯುತುಲ್ಲಾ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅವರಿಗೆ ಈ ಸಬಂಧ ಮನವಿ ಸಲ್ಲಿಸಿದ್ದಾರೆ.
ಬಕ್ರೀದ್ ಹಬ್ಬದ ದಿನ ಸಾಮಾನ್ಯವಾಗಿ ನಗರದಲ್ಲಿ 400 ಟನ್ ಗಳಷ್ಟು ತ್ಯಾಜ್ಯ ಉಂಟಾಗುತ್ತದೆ. ಹಬ್ಬದ ದಿನ 3 ಲಕ್ಷ ಪ್ರಾಣಿಗಳನ್ನು ಬಲಿ ನೀಡಲಾಗುತ್ತದೆ. ಇದರಿದಂ ತ್ಯಾಜ್ಯ ಉಂಟಾಗುತ್ತದೆ. ಸುರಕ್ಷತೆ, ಪ್ರಾಣಿ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ಕಸಾಯಿಖಾನೆಗಳನ್ನು ಸ್ಥಾಪಿಸಬೇಕು. ಇಲ್ಲಿ ಪ್ರಾಣೆ, ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ವ್ಯವಸ್ಥೆ ಇರುವಂತೆ ಮಾಡಬೇಕು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಎದುರಾಗಿದ್ದ ನೀರಿನ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ವಿವೇಚನೆಯಿಂದ ಬಳಕೆ ಮಾಡಬೇಕು. ನಗರದ ಹಲವೆಡೆ ಒಳಚರಂಡಿ ವ್ಯವಸ್ಥೆಗಳು ಸಂಸ್ಕರಣಾ ಸಂಪರ್ಕಗಳನ್ನು ಹೊಂದಿಲ್ಲ. ಪ್ರಾಣಿಗಳ ಬಲಿದಾನದ ವೇಳೆ ತ್ಯಾಜ್ಯ ಮಳೆನೀರು ಚರಂಡಿಗೆ ಹೋಗುತ್ತವೆ. ಇದರಿಂದ ಜಲಮೂಲಗಳು ಹಾಳಾಗುತ್ತದೆ. ನಮ್ಮ ಒಳಚರಂಡಿ ಸಂಸ್ಕರಣಾ ಘಟಕಗಳು (ಎಸ್‌ಟಿಪಿ) ಪ್ರಾಣಿಗಳ ತ್ಯಾಜ್ಯವನ್ನು ತಡೆಯಲು ಫಿಲ್ಟರ್‌ಗಳನ್ನು ಹೊಂದಿಲ್ಲ, ಹೀಗಾಗಿ ಎಲ್ಲಾ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಯ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು. ಬಿಬಿಎಂಪಿ ವಾರ್ಡ್ ಎಂಜಿನಿಯರ್‌ಗಳು ಮತ್ತು ಆರೋಗ್ಯ ಅಧಿಕಾರಿಗಳ ಬೆಂಬಲದೊಂದಿಗೆ ತಂತ್ರಗಳನ್ನು ರೂಪಿಸಬೇಕು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



