ರಾಜ್ಯ

ಗೃಹ ಸಚಿವರಿಗೆ ಪ್ರೋಟೋಕಾಲ್ ಗೊತ್ತಿಲ್ಲವೇ?: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ವಿಚಾರವಾಗಿ HD ಕುಮಾರಸ್ವಾಮಿ

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮಾಡಿದ ಮನವಿಯನ್ನು ಬೆಂಬಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಗೃಹ ಸಚಿವರಿಗೆ ಪ್ರೋಟೋಕಾಲ್ ಗೊತ್ತಿಲ್ಲವೇ?: ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ವಿಚಾರವಾಗಿ HD ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮಾಡಿದ ಮನವಿಯನ್ನು ಬೆಂಬಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾವು ಅದನ್ನು ಬೆಂಬಲಿಸಲಿದ್ದೇವೆ. ಕೇಂದ್ರವು ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ನಿರ್ಧರಿಸಿದರೆ ನಾವು ಸ್ವಾಗತಿಸುತ್ತೇವೆ' ಎಂದು ಭಾನುವಾರ ಹೇಳಿದರು.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ರಾಜ್ಯ ಸರ್ಕಾರ ಮಾಡಿರುವ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಆರೋಪಿಸಿರುವ ಗೃಹ ಸಚಿವ ಜಿ ಪರಮೇಶ್ವರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ರಾಜ್ಯದ ಗೃಹ ಸಚಿವರಾಗಿರುವ ಅವರು ಈ ವಿಷಯದಲ್ಲಿ ಅನುಸರಿಸಬೇಕಾದ ಕಾನೂನು ಮತ್ತು ಪ್ರೋಟೋಕಾಲ್ ಬಗ್ಗೆ ತಿಳಿದಿರಬೇಕು ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಪಡಿಸಲು ಮತ್ತು ಅವರ ಹಸ್ತಾಂತರ ಮತ್ತು ಬಂಧನಕ್ಕೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (ಎಂಇಎ) ಪತ್ರ ಬರೆದಿತ್ತು.

'ಗೃಹ ಸಚಿವರಿಗೆ ಪ್ರೋಟೋಕಾಲ್ ತಿಳಿದಿದೆಯೇ ಅಥವಾ ಇಲ್ಲವೇ? ಕಾನೂನುಗಳು ಮತ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು. 24 ಗಂಟೆಗಳಲ್ಲಿ ತಕ್ಷಣ ರದ್ದುಗೊಳಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಕಾರ್ಯವಿಧಾನವಿದೆ' ಎಂದು ಕುಮಾರಸ್ವಾಮಿ ಹೇಳಿದರು.

ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಲು ಕರ್ನಾಟಕ ಸರ್ಕಾರ ಮಾಡಿರುವ ಮನವಿಯನ್ನು ಮೇ 21ರಂದು ವಿದೇಶಾಂಗ ಸಚಿವಾಲಯವು ಸ್ವೀಕರಿಸಿದೆ ಎಂದಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿಕೆಗೆ ಪರಮೇಶ್ವರ ತರಾಟೆಗೆ ತೆಗೆದುಕೊಂಡಿದ್ದರು.

'ಪ್ರಧಾನಿ ಕಾರ್ಯಾಲಯ (ಪಿಎಂಒ) ವಿದೇಶಾಂಗ ಸಚಿವಾಲಯದ ಕಚೇರಿಗೆ ಮಾಹಿತಿ ನೀಡಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದರು. ನಮ್ಮ ಸಿಎಂ ಪ್ರಧಾನಿಗೆ ಬರೆದ ಪತ್ರ ಏನಾಯಿತು?. ಆದರೆ, ಈ ವಿಚಾರದಲ್ಲಿ ಎಂಇಎಯಿಂದ ಯಾವುದೇ ಲಿಖಿತ ಸಂವಹನ ಬಂದಿಲ್ಲ' ಎಂದು ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.