ರಾಜ್ಯ

ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ಲಘು ಮಳೆ ಹೊರತಾಗಿಯೂ ತಾಪಮಾನ ಹೆಚ್ಚಳ ಸಾಧ್ಯತೆ; ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತವು ದುರ್ಬಲಗೊಳ್ಳುವ ನಿರೀಕ್ಷೆಯಿದ್ದು, ಇದು ಬೆಂಗಳೂರಿನ ಹವಾಮಾನದ ಮೇಲೆ ನಿರ್ದಿಷ್ಟ ಪ್ರಭಾವ ಬೀರುವುದಿಲ್ಲ ಎಂದು ಐಎಂಡಿಯ ವಿಜ್ಞಾನಿ ತಿಳಿಸಿದ್ದಾರೆ.

ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ಲಘು ಮಳೆ ಹೊರತಾಗಿಯೂ ತಾಪಮಾನ ಹೆಚ್ಚಳ ಸಾಧ್ಯತೆ; ಹವಾಮಾನ ಇಲಾಖೆ
ಪ್ರಾತಿನಿಧಿಕ ಚಿತ್ರ
Published On :

ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ತಾಪಮಾನದ ಪ್ರಮಾಣವು ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಆದರೆ, ನಗರದಲ್ಲಿ ಮೇ 30ರವರೆಗೆ ಬಿರುಗಾಳಿಯೊಂದಿಗೆ ಕಡಿಮೆ ಅಥವಾ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತವು ದುರ್ಬಲಗೊಳ್ಳುವ ನಿರೀಕ್ಷೆಯಿದ್ದು, ಇದು ಬೆಂಗಳೂರಿನ ಹವಾಮಾನದ ಮೇಲೆ ನಿರ್ದಿಷ್ಟ ಪ್ರಭಾವ ಬೀರುವುದಿಲ್ಲ ಎಂದು ಐಎಂಡಿಯ ವಿಜ್ಞಾನಿ ತಿಳಿಸಿದ್ದಾರೆ.

ಆದಾಗ್ಯೂ, ಮುಂಬರುವ ವಾರದಲ್ಲಿ ಗರಿಷ್ಠ ತಾಪಮಾನವು 33 ರಿಂದ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಆದರೆ, ಕನಿಷ್ಠ ತಾಪಮಾನವು 23 ರಿಂದ 24 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದ್ದು, ಇದು ಸಾಮಾನ್ಯ ತಾಪಮಾನಕ್ಕಿಂತ ಸ್ವಲ್ಪ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕೇರಳ ಕರಾವಳಿಯಲ್ಲಿ ಮಾನ್ಸೂನ್ ವ್ಯವಸ್ಥೆಗಳಿಲ್ಲದ ಪರಿಣಾಮವಾಗಿ ನಗರದಲ್ಲಿ ತಾಪಮಾನದ ಏರಿಳಿತ ಮತ್ತು ಲಘುವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ನೈರುತ್ಯ ಮುಂಗಾರು ಜೂನ್ 5 ರೊಳಗೆ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.