ಈ ಬಾರಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
ಕಳೆದ ವರ್ಷವೇ ಶಾಲಾ ಪಠ್ಯಪುಸ್ತಕ ಪರಿಷ್ಕರಿಸಲಾಗಿದ್ದು, ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ. ಕೆಲವು ಪದ ಹಾಗೂ ವಾಕ್ಯಗಳಲ್ಲಷ್ಟೇ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಮೈಸೂರು: ಕಳೆದ ವರ್ಷವೇ ಶಾಲಾ ಪಠ್ಯಪುಸ್ತಕ ಪರಿಷ್ಕರಿಸಲಾಗಿದ್ದು, ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ. ಕೆಲವು ಪದ ಹಾಗೂ ವಾಕ್ಯಗಳಲ್ಲಷ್ಟೇ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕೃತ ಪಠ್ಯಪುಸ್ತಕಗಳು ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಶೇ 95ರಷ್ಟು ಪಠ್ಯಪುಸ್ತಕಗಳು ಈಗಾಗಲೇ ಶಾಲೆಗಳಿಗೆ ತಲುಪಿವೆ ಎಂದರು. ಮೇ 29 ರಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭಗೊಳ್ಳುತ್ತಿದ್ದು, ಮೊದಲ ದಿನ ಮಕ್ಕಳನ್ನು ಆತ್ಮೀಯವಾಗಿ ಬರ ಮಾಡಿಕೊಂಡು ಸಿಹಿಯೂಟ ನೀಡಬೇಕೆಂದು ಶಿಕ್ಷಣ ಇಲಾಖೆ ತಿಳಿಸಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಹೆಸರುಬೇಳೆ ಪಾಯಸ, ಕೇಸರಿಬಾತ್ ಇಲ್ಲವೇ ಯಾವುದಾದರೊಂದು ಸಿಹಿಯನ್ನು ನೀಡಲಾಗುತ್ತದೆ ಎಂದರು.
ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಕೋವಿಡ್ ನಂತರ ಶಾಲಾ ಮಕ್ಕಳಿಗೆ ಬೈಸಿಕಲ್ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಸರ್ಕಾರ ಸಂಪುಟದಲ್ಲಿ ಚರ್ಚಿಸಿ ವಿತರಿಸಲು ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದರು.
ಶೂ ವಿತರಿಸಲು ಶಾಲಾಭಿವೃದ್ಧಿ ಸಮಿತಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಲಾಗುವುದು. ಬಿಬಿಎಂಪಿ ಶಾಲೆಗಳನ್ನು ಇಲಾಖೆ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕವಾಗಿದ್ದು, ಈ ಬಗ್ಗೆ ಜೂನ್ 4ರ ನಂತರ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದೂ ಮಾಹಿತಿ ನೀಡಿದರು.
ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, ಎರಡು ಗ್ರಾಮ ಪಂಚಾಯಿತಿಗೊಂದರಂತೆ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಗುವುದು. ಈ ಬಾರಿ 600 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುುತ್ತಿದೆ. ಶಿಕ್ಷಕರ ನೇಮಕಾತಿಗೂ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



