ವಿಧಾನ ಪರಿಷತ್ ಚುನಾವಣೆ: ಜೂನ್ 3ರಂದು ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಜೆ ಘೋಷಣೆ
ಜೂನ್ 3ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೇ ಜೂನ್ 3ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿಧಾನ ಪರಿಷತ್ ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ವಿಶೇಷ ರಜೆ ನೀಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಇತ್ತ ವಿಧಾನ ಪರಿಷತ್ ಚುನಾವಣೆ ಗೆಲ್ಲೋಕೆ ಬಿಜೆಪಿ -ಜೆಡಿಎಸ್ ನಾಯಕರು ಮೊದಲ ಸಮನ್ವಯ ಸಭೆ ನಡೆಸಿದ್ದು, ಸಭೆಯಲ್ಲಿ ಜೂನ್ 3ರಂದು ನಡೆಯೋ ಶಿಕ್ಷಕ, ಮತ್ತು ಪದವೀಧರ ಕ್ಷೇತ್ರಗಳನ್ನ ಗೆಲ್ಲೋಕೆ ರಣತಂತ್ರ ರೂಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



