ಬಿಟ್‌ಕಾಯಿನ್ ಹಗರಣ: ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಾಧರ್ ಬಂಧನ
ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ್ದಾರೆ.
ಅಧಿಕಾರ ದುರ್ಬಳಕೆ ಹಾಗೂ ಸಾಕ್ಷ್ಯನಾಶ ಆರೋಪದಡಿ ಇನ್ಸ್‌ಪೆಕ್ಟರ್ ಚಂದ್ರಾಧರ್ ಅವರನ್ನು ಎಸ್ಐಟಿ ಪೊಲೀಸರು ಸುಧೀರ್ಘ ವಿಚಾರಣೆ ನಡೆಸಿ ಇಂದು ಬಂಧಿಸಿದ್ದಾರೆ.
ಸೈಬರ್ ಕ್ರೈಂ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಮೂವರು ಪೊಲೀಸರು ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಆಗಿರುವ ಶ್ರೀಕೃಷ್ಣ ಆಲಿಯಾಸ್ ಶ್ರೀಕಿಯನ್ನು 2020ರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಈತನ ವಿರುದ್ಧ ಕೆಂಪೇಗೌಡನಗರ, ಅಶೋಕನಗರ ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಸೈಬರ್ ಕ್ರೈಂ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಚಂದ್ರಾಧರ್ ಅವರು ಶ್ರೀಕಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




