ಲಿಕ್ವಿಡ್ ನೈಟ್ರೋಜನ್ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ: ಬಳಸಿದರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ!
ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ.

ಬೆಂಗಳೂರು: ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ.
ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ ಹಾಗೂ ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್ (ದ್ರವ ಸಾರಜನಕ) ಬಳಸುವುದನ್ನು ನಿರ್ಬಂಧಿಸಲಾಗಿದೆ.
ಈ ಕುರಿತು ಮೇ 3ರಂದು ಆದೇಶಿಸಲಾಗಿದ್ದು, ಅಗತ್ಯ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಆಹಾರ ತಯಾರಕರ ವಿರುದ್ಧ 7 ವರ್ಷ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು 12 ವರ್ಷರ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು ಈ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ಮುಂದಾಗಿತ್ತು.
ಜೊತೆಗೆ ಎಲ್ಲಾ ಹೋಟೆಲ್ ಹಾಗೂ ಪಾನ್ ಬೀಡಾ ಅಂಗಡಿಗಳಿಗೂ ಹೋಟೆಲ್ ಅಸೋಸಿಯೇಷನ್ ಆದೇಶ ನೀಡಿದೆ. ಈ ಆದೇಶ ಮೀರಿಯೂ ಒಂದು ವೇಳೆ ಲಿಕ್ವಿಡ್ ನೈಟ್ರೋಜನ್ ಪಾನ್ ಮಾರಿದ್ದೇ ಆದರೆ ಅಂತಹ ಹೋಟೆಲ್ ಅಥವಾ ಪಾನ್ ಬೀಡಾ ದಂಡ ಆಥವಾ ಪರವಾನಿಗೆ ರದ್ದು ಮಾಡಲು ನಿರ್ಧರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



