ರಾಜ್ಯ

ಆತ್ಮಹತ್ಯೆಗೀಡಾದ ವಾಲ್ಮೀಕಿ ನಿಗಮದ ಅಧಿಕಾರಿ ಕುಟುಂಬಸ್ಥರಿಗೆ ವಿಜಯೇಂದ್ರ ಸಾಂತ್ವನ; ಸಿಬಿಐ ತನಿಖೆಗೆ ಒತ್ತಾಯ

ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ನಿವಾಸಕ್ಕೆ ಬಿ. ವೈ. ವಿಜಯೇಂದ್ರ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಆತ್ಮಹತ್ಯೆಗೀಡಾದ ವಾಲ್ಮೀಕಿ ನಿಗಮದ ಅಧಿಕಾರಿ ಕುಟುಂಬಸ್ಥರಿಗೆ ವಿಜಯೇಂದ್ರ ಸಾಂತ್ವನ; ಸಿಬಿಐ ತನಿಖೆಗೆ ಒತ್ತಾಯ
ಬಿ.ವೈ. ವಿಜಯೇಂದ್ರ
Published On :

ಶಿವಮೊಗ್ಗ: ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ನಿವಾಸಕ್ಕೆ ಬಿ.ವೈ. ವಿಜಯೇಂದ್ರ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಮಧ್ಯೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಸರ್ಕಾರ 2 ಲಕ್ಷ ರೂ. ಪರಿಹಾರ ನೀಡಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಮೇಲ್ನೋಟಕ್ಕೆ ಕಾಣುವಂತೆ ಇದು ಬರೀ ನಿಗಮದ ಅಧಿಕಾರಿ ಅತ್ಮಹತ್ಯೆ ಪ್ರಕರಣ ಅಲ್ಲ. ಇದರ ಹಿಂದೆ ದೊಡ್ಡ ಕುಳಗಳ ಕೈವಾಡದ ಶಂಕೆಯಿದೆ. ಸಚಿವರ ಗಮನಕ್ಕೆ ಬಾರದೇ ಇಷ್ಟೊಂದು ದೊಡ್ಡ ಅವ್ಯವಹಾರ ನಡೆಯಲು ಸಾಧ್ಯವೇ ಇಲ್ಲ. ನೈತಿಕ ಹೊಣೆ ಹೊತ್ತು ಸಚಿವ ಬಿ. ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಪಾರದರ್ಶಕ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ನಿಗಮದ ನೂರಾರು ಕೋಟಿ ರೂ. ಹಣ ಲೋಕಸಭೆ ಚುನಾವಣೆಗೆ ಮುನ್ನ ಅಕ್ರಮವಾಗಿ ತೆಲಂಗಾಣಕ್ಕೆ ವರ್ಗಾವಣೆ ಆಗಿದೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.