ರಾಜ್ಯ

ಬೀದರ್: ನಾಟಕ ಪ್ರಾಕ್ಟೀಸ್ ವೇಳೆ ಜೈ ಶ್ರೀರಾಮ್ ಘೋಷಣೆ; ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ, ಪರಿಸ್ಥಿತಿ ಉದ್ವಿಗ್ನ

ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಮೇ 31 ರಂದು ಯುವಜನೋತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ವಿದ್ಯಾರ್ಥಿಗಳು ಬುಧವಾರ ಅಭ್ಯಾಸ ನಡೆಸುತ್ತಿದ್ದರು ಎಂದು ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ತಿಳಿಸಿದರು.

ಬೀದರ್: ನಾಟಕ ಪ್ರಾಕ್ಟೀಸ್ ವೇಳೆ ಜೈ ಶ್ರೀರಾಮ್ ಘೋಷಣೆ; ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ, ಪರಿಸ್ಥಿತಿ ಉದ್ವಿಗ್ನ
ಸಾಂದರ್ಭಿಕ ಚಿತ್ರ
Published On :

ಬೀದರ್: ಬೀದರ್ ನಗರದ ಹೊರವಲಯದಲ್ಲಿರುವ ಮೈಲೂರಿನಲ್ಲಿರುವ ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಬುಧವಾರ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಮೇ 31 ರಂದು ಯುವಜನೋತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ವಿದ್ಯಾರ್ಥಿಗಳು ಬುಧವಾರ ಅಭ್ಯಾಸ ನಡೆಸುತ್ತಿದ್ದರು ಎಂದು ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ನಾಟಕ ಅಭ್ಯಾಸ ಮಾಡುತ್ತಿದ್ದಾಗ ನಾಟಕದ ಭಾಗವಾಗಿದ್ದ ಇಬ್ಬರು ‘ಜೈ ಶ್ರೀ ರಾಮ್’ ಘೋಷಣೆ ಕೂಗಿದರು. ಇದಕ್ಕೆ ಇನ್ನೊಂದು ಸಮುದಾಯದ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಕ್ಯಾಂಪಸ್‌ನಲ್ಲಿ ಎರಡೂ ಸಮುದಾಯಗಳ ವಿದ್ಯಾರ್ಥಿಗಳು ಜಗಳ ಆರಂಭಿಸಿದ್ದು ನೂಕುನುಗ್ಗಲು ಉಂಟಾಗಿ ಮಾರಾಮಾರಿ ನಡೆದಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಎರಡು ಗುಂಪುಗಳನ್ನು ಪ್ರತ್ಯೇಕಿಸಿ ಪರಿಸ್ಥಿತಿ ಸುದಾರಿಸಿದರು. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ನಿಷೇಧಾಜ್ಞೆ ಹೇರುವ ಅಗತ್ಯವಿರಲಿಲ್ಲ. ಕಾಲೇಜು ಮತ್ತು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಲ್ಲದೇ ಕಾಲೇಜು ಆಡಳಿತ ಮಂಡಳಿ ಯುವಜನೋತ್ಸವವನ್ನು ರದ್ದುಗೊಳಿಸಿದೆ ಎಂದು ಹೇಳಿದ್ದಾರೆ. ‘ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ. ಮೆಡಿಕೋ-ಲೀಗಲ್ ಪ್ರಕರಣವನ್ನು ದಾಖಲಿಸಿದ ನಂತರ ಅವರನ್ನು ತಪಾಸಣೆಗೆ ಒಳಪಡಿಸಲಾಯಿತು. ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.