ಮಂಗಳೂರಿನ ರಸ್ತೆಯಲ್ಲೇ ನಮಾಜ್: ಬಿ-ರಿಪೋರ್ಟ್ ಸಲ್ಲಿಸಿದ ಪೊಲೀಸರು, ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ
ಮಂಗಳೂರು ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ನಗರ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.

ಮಂಗಳೂರು: ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ನಗರ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕದ್ರಿ ಪೊಲೀಸ್ ಇನ್ಸ್‌ಪೆಕ್ಟರ್ ಸೋಮಶೇಖರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.
ಪೊಲೀಸರ ಈ ಕ್ರಮಕ್ಕೆ ಹಲವಾರು ಕಡೆಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ನಂತರ ಇನ್ಸ್‌ಪೆಕ್ಟರ್ ಅನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸಂಚಾರದ ಮೇಲೆ ಪರಿಣಾಮ ಬೀರುವ ಇತರ ಧಾರ್ಮಿಕ ಆಚರಣೆಗಳಿಗೆ ಪೊಲೀಸರು ಇದೇ ನಿಯಮವನ್ನು ಏಕೆ ಅನ್ವಯಿಸುವುದಿಲ್ಲ ಎಂದು ಹಲವರು ಪ್ರಶ್ನಿಸಿದ್ದರು.
ಈ ಕುರಿತು ಹೇಳಿಕೆ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಘಟನೆ ಕುರಿತು ಇನ್ಸ್‌ಪೆಕ್ಟರ್ ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.
ಈಮಧ್ಯೆ, ರಸ್ತೆಗಳಲ್ಲಿ ಮತ್ತೆ ನಮಾಜ್ ಮಾಡಿದ ಪ್ರಕರಣಗಳು ವರದಿಯಾದರೆ ಬಜರಂಗದಳ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವಿಎಚ್‌ಪಿ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಐಪಿಸಿ ಸೆಕ್ಷನ್ 154 ಎ ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಕ್ಕೆ ಪಂಪ್‌ವೆಲ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



