ಚನ್ನಪಟ್ಟಣ ಉಪಚುನಾವಣೆ: ಪ್ರಚಾರದ ವೇಳೆ ಆಯತಪ್ಪಿ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಪಕ್ಷದ ನಾಯಕ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಬೈಕ್‌ನಿಂದ ಬಿದ್ದ ಘಟನೆ ಶನಿವಾರ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.
ಸ್ಥಳೀಯ ಕಾರ್ಯಕರ್ತರು ಕೂಡಲೇ ನಿಖಿಲ್ ಅವರ ಸಹಾಯಕ್ಕೆ ಬಂದು ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಘಟನೆಯಲ್ಲಿ ನಿಖಿಲ್ ಅವರ ಬಲಗಾಲಿಗೆ ಪೆಟ್ಟಾಗಿದ್ದರೂ, ನಿಖಿಲ್ ಅವರು ಕೆಲಕಾಲ ವಿಶ್ರಾಂತಿ ಪಡೆದು ನಂತರ ಮತ್ತೆ ಪ್ರಚಾರ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



