ವಕ್ಫ್ ವಿವಾದ: ಸರ್ಕಾರದ ವಿರುದ್ಧ ಸಿಡಿದೆದ್ದ BJP, ಇಂದು ರಾಜ್ಯದಾದ್ಯಂತ ಪ್ರತಿಭಟನೆ
ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಗಳನ್ನು ಮುಂದಿಟ್ಟುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕುಗಳ ತಾಲೂಕು ಕಚೇರಿ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಂಗಳೂರು: ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಿದೆ.
ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಗಳನ್ನು ಮುಂದಿಟ್ಟುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕುಗಳ ತಾಲೂಕು ಕಚೇರಿ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಾಕರ್ತರು ಪಾಲ್ಗೊಳ್ಳಲಿದ್ದಾರೆಂದು ಬಿಜೆಪಿ ತಿಳಿಸಿದೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು, 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಲು ಆಗ್ರಹಿಸಿ ಮತ್ತು ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದರು.
ಕರ್ನಾಟಕದ ವಕ್ಫ್ನಲ್ಲಿ ನಡೆದಿರುವ ನಕಲಿ ದಾಖಲೆಗಳ ಸೃಷ್ಟಿ, ಆ ಮೂಲಕ ಮಾಡಿಕೊಂಡಿರುವ ಲಾಭದ ಕುರಿತು ಇ.ಡಿ. (ಜಾರಿ ನಿರ್ದೇಶನಾಲಯ) ತನಿಖೆಯಾಗಬೇಕು. 50 ವರ್ಷದ ಹಿಂದಿನ ಗೆಜೆಟ್ ನೆಪವೊಡ್ಡಿ 50 ವರ್ಷ ಯಾವುದೇ ಕ್ರಮ ಕೈಗೊಳ್ಳದೇ, ಈಗ ಅಲ್ಪಸಂಖ್ಯಾತರ ಮತ ಬ್ಯಾಂಕ್ ರಾಜಕಾರಣಕ್ಕಾಗಿ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ, ಕರ್ನಾಟಕ ವಕ್ಫ್ ಬೋರ್ಡ್ ಮೂಲಕ ಮಾಡಿರುವ ಬೃಹತ್ ದಾಖಲೆಗಳ ಸೃಷ್ಟಿಯ ಎಲ್ಲಾ ವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ವಕ್ಫ್ ಕಾಯ್ದೆಯ ದುರ್ಬಳಕೆಯ ಕಾರಣಕ್ಕಾಗಿ ರೈತರು, ಮಠಗಳು, ಹಿಂದೂ ದೇವಾಲಯಗಳಿಗೆ ಆತಂಕ ಎದುರಾಗಿದೆ. ಹಿಂದೆ ಕಾಂಗ್ರೆಸ್ನವರು ರೂಪಿಸಿರುವ ವಕ್ಫ್ ಕಾಯ್ದೆ ಮುಸ್ಲಿಂ ತುಷ್ಟೀಕರಣಕ್ಕಾಗಿ, ಮತಗಳಿಕೆಯ ಆಸೆಯೊಂದಿಗೆ ರಚಿಸಿರುವ ಕಾಯ್ದೆಯಾಗಿದೆ ಎಂದು ತಿಳಿಸಿದರು.
ರೈತರು ವಿಭಿನ್ನ ತರಹದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಆಸ್ತಿ ಕಳೆದುಕೊಳ್ಳುವ ಭೀತಿ ನಿರ್ಮಾಣವಾಗಿದೆ. ಈ ಸಂಬಂಧ ಕೇವಲ ನೋಟಿಸ್ ಹಿಂಪಡೆದರೆ ಸಾಲದು, ರೈತರ ಆಸ್ತಿಗಳಲ್ಲಿ ರೈತರ ಹೆಸರನ್ನು ನಮೂದಿಸಬೇಕು. ಅಲ್ಲದೆ, 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



