ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್; ವಿಚಾರಣೆಗೆ ಹಾಜರಾಗುತ್ತೇನೆ ಎಂದ ಸಿಎಂ
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸಬೇಕಾಗಿ ಬಂದಿದೆ.
ಪ್ರಕರಣ ಸಂಬಂಧ ಈಗಾಗಲೇ ಲೋಕಾಯುಕ್ತ ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯನವರ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ಎ1 ಆರೋಪಿಗೂ ಸಹ ಲೋಕಾಯುಕ್ತ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.ಮುಡಾ
ಪ್ರಕರಣದಲ್ಲಿ ಎ2 ಆರೋಪಿ, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಎ3 ಮಲ್ಲಿಕಾರ್ಜುನ ಹಾಗೂ ಎ4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ.
ಇನ್ನು ಹಾವೇರಿಯಲ್ಲಿ ಲೋಕಾಯುಕ್ತ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೌದು ನನಗೆ ನೋಟಿಸ್ ಬಂದಿದೆ. ವಿಚಾರಣೆಗೆ ಹಾಜರಾಗುತ್ತೇನೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.
ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



